ಶ್ರೀರಾಮ ಜಯರಾಮ ಜಯತುಜಯತು ಸೀತಾರಾಮ ರಾಮ ಚರ-ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ-ಣಾರಿ ನೀನಲ್ಲದೆ ಯಾರಿಲ್ಲಗತಿಜಯ ರಾಮ ರಾಮ1ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ-ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ-ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ-ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ-ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ-ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ-ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4ಮುಖ್ಯ ಸಚಿವ ಮಹಾ ಮುಖ್ಯಪ್ರಾಣನುಸೀತಾರಾಮ ರಾಮ ದುಷ್ಟ-ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ-ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ-ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮವಾಸವಮುಖ್ಯ ವಿಬುಧಾಸುರನುತಸೀತಾರಾಮ ರಾಮ ಸಾಧು-ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ-ಜ್ಞಾನ ಭಕ್ತಿಭಾಗ್ಯ ನೀನಿತ್ತುಪೊರೆಜಯ ರಾಮ ರಾಮಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ-ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮಬತ್ತಿಹೋಗಲಿ ಮೋಹದುತ್ತುಂಗಾರ್ಣವಸೀತಾರಾಮ ರಾಮ ಪರ-ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ-ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ-ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ-ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ-ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ-ಸನ್ನ ನಿನ್ನ ಸ್ಮರಣೆಯನಿತ್ತುಪೊರೆಜಯ ರಾಮ ರಾಮಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣುಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12ನಿತ್ಯನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ-ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ-ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು-ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ-ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14ಅಕುಟಿಲಗುಣಗಳ ಪ್ರಕಟಿಸೆನ್ನೊಳುಸೀತಾರಾಮ ರಾಮ ವಾಯು-ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮಲಕ್ಷುಮಿನಾರಾಯಣ ತ್ರಿಕಣಕುದ್ಧಾಮನೆಸೀತಾರಾಮ ರಾಮ ಬ್ರಹ್ಮಾ-ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15