ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮವೆಂಬಿರಿ ನಿಮ್ಮ ಬರಿದೆ ಮಾತಲ್ಲದೆಬ್ರಹ್ಮನಾದವನ ಬಗೆಯನು ಹೇಳುವೆ ಕೇಳಿ ಪ ಆಶಾಪಾಶಗಳಿಗೆ ವಶವಾಗದವ ಬ್ರಹ್ಮಮೋಸಹೋಗದೆ ಮಾಯೆಗೆ ಇರುವವ ಬ್ರಹ್ಮಕೂಸಿನಂದದಿ ಭಾವ ಕೂಡಿಹನವ ಬ್ರಹ್ಮಘಾಸಿಯಾಗನು ಮದನಗೆ ಅವನು ಬ್ರಹ್ಮ 1 ಸತಿಸುತರಿಚ್ಛೆಯ ಸಮನಿಸದವ ಬ್ರಹ್ಮಇತರರ ವಾಕ್ಯಕೆ ಕಿವಿಗೊಡದವ ಬ್ರಹ್ಮಗತಿ ಯಾವುದೆನಗೆಂದು ಗುಣಿಸುತಿಪ್ಪವ ಬ್ರಹ್ಮಅತಿ ಹರುಷದಿಂ ಬಾಳುತಿರುವವನು ಬ್ರಹ್ಮ2 ಸಕಲ ವಿಶ್ವವು ಎನ್ನ ಸರಿಯು ಎಂಬುವವ ಬ್ರಹ್ಮಸುಖ ದುಃಖವನು ಸಮದೃಷ್ಟಿಯಲಿ ನೋಡುವವ ಬ್ರಹ್ಮಭಕುತಿ ಭಾವನೆಯಿರುವ ಮಾನವನು ತಾ ಬ್ರಹ್ಮಮುಕುತಿ ಮರ್ಗದಲಿರುವ ಯೋಗಿಯವ ಬ್ರಹ್ಮ 3 ಹುಚ್ಚರಂದದಿ ನೋಡೆ ಹುದುಗಿಕೊಂಡಿಹ ಬ್ರಹ್ಮಅಚ್ಚರಿಯ ಅವನಾಟ ತಿಳಿವವನು ಬ್ರಹ್ಮನಿತ್ಯಕಾಲದಿ ಜ್ಞಾನ ಬೇಕೆನ್ನುವವ ಬ್ರಹ್ಮಕೊಚ್ಚಿತೆಂಬನು ಎಲ್ಲ ಕುಲಜ ಬ್ರಹ್ಮ4 ದಾಸದಾಸರ ದಾಸನಾದವನೆ ಬ್ರಹ್ಮಈ ದೇಹದಾ ಹಂಗ ತೊರೆದವನು ಬ್ರಹ್ಮಭಾಸುರ ಚಿದಾನಂದನ ಭಜಿಪ ಭಕ್ತನೆ ಬ್ರಹ್ಮವಾಸರಿಲ್ಲವೋ ಈ ವಾಕ್ಯಕೆಂಬುವವ ಬ್ರಹ್ಮ5
--------------
ಚಿದಾನಂದ ಅವಧೂತರು
ಸರ್ವ ಪರಬ್ರಹ್ಮ ಸರ್ವ ಪರಬ್ರಹ್ಮಸರ್ವ ಪರಬ್ರಹ್ಮ ತಾನೆ ಪರಬ್ರಹ್ಮಪಹುದುಗಲ್ಲ ಕಣುಕಲ್ಲ ಬೇಳೇ ಭಕ್ಷ್ಯವು ಅಲ್ಲಅದರೊಳಗಣ ಸಿಹಿ ಅದುವೆ ಪರಬ್ರಹ್ಮ1ತೊಳೆಯಲ್ಲ ಬೀಜಲ್ಲ ತೊಗಟಲ್ಲ ಹಣ್ಣಲ್ಲತಿಳಿಯೆ ರುಚಿಯು ಬೇರೆ ಅದುವೆ ಪರಬ್ರಹ್ಮ2ಹಾಲು ನವ ನೀತವಲ್ಲ ಮೊಸರು ಮಜ್ಜಿಗೆಯಲ್ಲಹಾಲೊಳಗಣಘೃತಅದುವೆ ಪರಬ್ರಹ್ಮ3ದೇಹವಲ್ಲ ತತ್ವವಲ್ಲ ಮನ ಬುದ್ಧೀಂದ್ರಿಯವಲ್ಲದೇಹದೊಳಗಣ ದೇಹಿ ಅದುವೆ ಪರಬ್ರಹ್ಮ4ಸರ್ವಮಾಯೆ ಮಾತುಮಿಥ್ಯಸರ್ವಬ್ರಹ್ಮವೇ ಸತ್ಯಸರ್ವ ಚಿದಾನಂದ ಸರ್ವ ಪರಬ್ರಹ್ಮ5
--------------
ಚಿದಾನಂದ ಅವಧೂತರು