ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಮಾನವಾ ಅಭಿಮಾನವಾ ಅವಿವೇಕವಾ ದೂಡೈ ಸುಖದುಃಖದಾ ಘನ ಮೂಲವಾ ಸುವಿವೇಕದೀ ನೋಡೈ ಪ ಪರರಿಂದ ಈ ಪರಿತಾಪವು ಬರುತಿರ್ಪುದೆಂಬುದಿದೋ ಬರಿ ಬ್ರಾಂತಿಯೋ ನಿಜವಲ್ಲವೋ ಅಲೋಚಿಸಿ ನೋಡೈ 1 ಗ್ರಹಕಾಲಗಳ್ ಘನ ಕರ್ಮಗಳ್ ಇವು ಕಾರಣಲ್ಲವಿದೋ ಮನವೇ ಇದೇ ಪರಿತಾಪದ ಘನಮೂಲವೈ ನೋಡೋ 2 ಸಟೆಯಾಗಿಹ ಸಂಸಾರವ ದಿಟವೆಂದು ತೋರ್ಪುದಿದೋ ಮನದಿಂದಲೇ ಇದು ಕಾಂಬುದೋ ಮನವಿಲ್ಲದಾಗಿಲ್ಲ 3 ಪರಮಾತ್ಮನ ಪರಿಪೂರ್ಣನ ಮರೆಮಾಡುತೀಮನವು ಹರಿದಾಡುತಾ ಸುಖದುಃಖವಾ ಗುಣಿಸುತ್ತ ತಾನಿಹುದೋ 4 ವನದಾಟಕೇ ಮರುಳಾಗದೇ ಗುರುಶಂಕರಾರ್ಯನಲಿ ಮನ ನಿಲ್ಲಿಸಿ ಈ ಮೋಹವಾ ಬಿಡು ಬೇಗ ನೀನೀಗ 5
--------------
ಶಂಕರಭಟ್ಟ ಅಗ್ನಿಹೋತ್ರಿ