ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವುದು ಖರೆಯೆಲೊ ಜೀವನೆ ಆವುದು ನಿಜವೆಲೊ ಪ ಆವುದು ಖರೆಯಲೋ ಜೀವ ಜಗದ ಸುಖ ಮಾಯದೆಲ್ಲನು ಭಾವಿಸಿ ನೋಡೋಅ.ಪ ಬಡತನ ನಿಜವೇನೋ ನಿನಗೀ ಕಡುಸಿರಿ ಸ್ಥಿರವೇನು ಮಡದಿ ಮಕ್ಕಳು ನಿನ್ನ ಸಂಗಡ ಕಡೆತನಕಿಹ್ಯರೇನೊ ಹೆಡತಲೆ ಮೃತ್ಯು ಬಂದು ಪಿಡಿದು ಎಳೆಯುವಾಗ ಅಡರಿಕೊಂಡು ನಿನ್ನ ಬಿಡಿಸಿಕೊಂಬುರೇನು 1 ರಾಜ್ಯ ಭಂಡಾರವೆಲ್ಲ ನಿನಗೆ ಸಹಜವಾದದ್ದಲ್ಲ ಗೋಜುಪ್ರಪಂಚ ನಿಖಿಲವಂ ದಿನಮಾಜಿಹೋಗುವುದೆಲೊ ಸೋಜಿಗವಾಗಿ ಮಿಂಚು ತೇಜದಡಗುವಂತೆ ಈ ಜಗ ಸಮಾಜ ನಿಜವಿನಿತಿಲ್ಲೆಲೊ 2 ಕತ್ತೆಯಂತೆ ಕೂಗಿ ಜನ್ಮವ್ಯರ್ಥ ಕಳೆಯಬೇಡೊ ಉತ್ತಮರಿಗೆ ಬಾಗಿ ಸತ್ಯಪಥಕೆ ಹೊಂದು ಪಾಡೊ ನಿತ್ಯ ನಿರ್ಮಲ ಸರ್ವೋತ್ತಮ ಶ್ರೀರಾಮಪಾದ ಭಕ್ತಿಯಿಂ ಪಾಡಿ ಮುಕ್ತಿಯ ಪಡೆಯೊ3
--------------
ರಾಮದಾಸರು
ಸಿಕ್ಕ ಸಮಯ ನಿಜ ತಿಳಿಯದಲೆ ಬರಿ ಕಕ್ಕುಲಾತಿ ನಿನಗ್ಯಾಕಲೆ ಮರುಳೆ ಪ ಬೊಕ್ಕಸ ಭಂಡಾರವೆಲ್ಲ ಸುಳ್ಳೆ ಸುಳ್ಳೆ ನಿನ್ನ ನಿಕ್ಕುವ ಮನೆ ಊರ್ಹೊರಗಿದೆಲೆ ಅ.ಪ ಮೇಲುಮಾಳಿಗೆಮನೆ ಸ್ಥಿರವಲ್ಲ ಬಹು ಬಾಳುವೆ ಧನಸಿರಿ ನಿನಗಿಲ್ಲ ನಾಳೆ ಬಂದೊದಗಲು ಯಮಶೂಲ ಹಿಂ ಬಾಲಿಸಿ ನಿನಗೊಂದು ಬರೋದಿಲ್ಲ 1 ಬಂಧುರ ಬುವಿಯಧಿಕಾರ ನಿಖಿಲ ಮಹ ಅಂದಣೈಶ್ವರ್ಯ ಛತ್ರ ನಂಬಿಗಿಲ್ಲ ತಂದೆ ತಾಯಿ ಬಂಧು ಬಳಗೆಲ್ಲ ನಿನ ಗೊಂದುಕೊಂದು ಸಂಬಂಧವಿಲ್ಲ 2 ಅತಿರಥರೆಲ್ಲರೀ ಭೂಮಿ ಸುಖ ನೆಚ್ಚಿ ಮತಿಗೆಟ್ಟು ಪೊಂದದಿರತಿ ದು:ಖ ಜತೆಯಲಾರ್ವೊಯ್ಯಲಿಲ್ಲಂತೆಕ್ಕ ಸುಳ್ಳೆ ವ್ಯಥೆ ಬಟ್ಟರು ತಿಳಿಯದಿದರ ಲೆಕ್ಕ 3 ಕ್ಷೋಣೆ ಪಾರುಪತ್ಯತನವೆಲ್ಲ ತಿಳಿ ಆನೆ ಕುದುರೆ ಒಂಟೆ ನಿನ್ನದಲ್ಲ ಕಾಣುವುದೆಲ್ಲ ಮಾಯಭವಜಾಲ ಮತ್ತು ಮನುಷ್ಯಜನುಮ ಸೀಗೋದಲ್ಲ 4 ನಾನು ನೀನೆಂಬುವ ದುಷ್ಟಮದ ಸುಟ್ಟು ಜ್ಞಾನದೊಡನೆ ಗೆಲಿ ಭವಬಾಧೆ ಧ್ಯಾನದಾಯಕ ಶ್ರೀರಾಮಪಾದ ನಿಜ ಧ್ಯಾನವಿಡಿದು ಪಿಡಿ ಮುಕ್ತಿಪದ 5
--------------
ರಾಮದಾಸರು