ಕಾಮಿತಾರ್ಥದಾಯಿ ಸೀತಾರಾಮರಾಜ ರಾಜ
ಸ್ವಾಮಿಯೆನ್ನ ಕಾಯೊ ಖಳನಿರ್ನಾಮ ಭಕ್ತಕಲ್ಪಭೂಜ ಪ.
ಸಾಕೇತಪುರದಿ ವಾಸಪ್ರಾಕೃತ ಲೀಲಾ ವಿಲಾಸ
ಸ್ವೀಕೃತ ರಕ್ಷಾವಿಭೂಷ ಯಾಕೆನ್ನೊಳುಪೇಕ್ಷೆ ಶ್ರೀಶಾ
ಬೀಕೃತಿಗಳ ದೂರೀಕರಿಸುವ ಕರು
ಣಾಕರ ಭಕ್ತ ಪರಾಕ ಪರಾತ್ಪರ 1
ಪಾತಕಿ ಜನೋದ್ಧಾರೈಕ ಹೇತುವ ತೋರುವೆನೆಂದು
ಸೇತು ನಿರ್ಮಿಸಿದ ರಘುನಾಥ ನೀನೆ ದೀನ ಬಂಧು
ವಾತಜಾತನಿಗೊಲಿದು ಸಂಪ್ರೀತಿಯೊಳಂಬುಜ
ಜಾತನಪದವಿಯನಾತಗೆ ಸಲಿಸಿದ 2
ಪಾಮರ ಪಾವನದಿವ್ಯ ನಾಮದೇವ ಸಾರ್ವಭೌಮ
ಸೀಮಾಹಿತಸದ್ಗುಣೈಕ ಧಾಮಾ ಸೀತಾಪೂರ್ಣಕಾಮಾ
ತಾಮರಸಾಸನವಂದ್ಯ ಶೇಷಗಿರಿ
ಧಾಮ ದಯಾಂಬುಧಿ ದಶರಥ ರಾಮಾ 3