ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನದಣಿ ನೋಡಿದೆನೊ ಸನಕಾದಿನಮಿತ ಮನದಣಿ ನೋಡಿದೆನು ದೃಢದಿ ಪ ನಿನಗೆ ಸರಿಯಿಲ್ಲ ಭುವನತ್ರಯದಿ ಮನಕೆ ಬೇಸರವಿಲ್ಲದನುದಿನ ತನುವನಪ್ಪಿಹಿಡಿದು ಭಕುತರ ಮನದ ವರಗಳನಡೆಸಿ ಸಲಹುವ ಕನಿಕರಾರ್ಣವ ವಿಠಲ ನಿನ್ನಡಿ ಅ.ಪ ಒಂದು ದಿನ ಆ ತ್ರೇತಾಯುಗದಲ್ಲಿ ಋಷಿಗಡಣ ಕೂಡಿ ಬಂದು ನಿಮ್ಮಯ ಚರಣಸನ್ನಿಧಿಲಿ ಭಯಭಕುತಿಯಿಂದ ವಂದಿಸಾಲಿಂಗನೆಯ ಕೋರುತಲಿ ಅಭಯ ಬೇಡುತಲಿ ನಿಂದ ಋಷಿಗಳಿಗ್ಹಲವು ಪರಿಯಲಿ ತಂದೆ ನೀ ಸಮ್ಮತವ ಪೇಳಿ ಬಂದು ದ್ವಾಪರಾಂತ್ಯಯುಗದಲಿ ಒಂದು ಅರಲವ ಅಗಲದಲೆ ನಿಮ್ಮ ಪೊಂದಿ ಆಲಿಂಗನವನೀಯುವೆ ನೆಂದು ವರವಿತ್ತ ವಿಠಲ ನಿಮ್ಮಡಿ 1 ಅಪಾರಮಹಿಮಜಾಲ ಅವತರಿತಿಸಿದಿ ದ್ವಾಪರಯುಗದಿ ಬಾಲಕೃಷ್ಣ ನೀನಾಗಿ ಶ್ರೀಪತಿ ಸುಜನಪಾಲ ದನುಜಕುಲಕಾಲ ಪಾಪಸಂಹಿತ ಅಮಿತಲೀಲ ಶಾಪಪರಿಹಾರ ವೇಣುಲೋಲ ತಾಪಸೋತ್ತಮರಿಷ್ಟ ನೀಡಲು ಗೋಪಿಕಾಸ್ತ್ರೀಯರೆನಿಸಿ ಪುಟ್ಟಿಸಿ ಗೌಪ್ಯದಾಲಿಂಗನವನಿತ್ತ ಭೂಪ ಭೂಪತಿ ವಿಠಲ ನಿಮ್ಮಡಿ 2 ಸುಗುಣ ಸಂತರಹೃದಯಸಂಚಾರ ದಾಸಾನುದಾಸರು ಪೊಗಳಿ ಭಜಿಸುವ ಗಾನಪ್ರಿಯಕರ ಮೌಲಕೌಸ್ತುಭ ಜಗದಜೀವನ ಪಾವನಾಕಾರ ಪರಮಸುಖಕರ ಅಗಣಿತಾಗಣಿತಮಹಿಮಭರಿತ ಪೊಗಳಲಳವೆ ನಿಮ್ಮ ಚರಿತ ತ್ರಿ ಜಗನಾಟಕ ಸುಲಭದಲಿ ನೀ ಅಗಲದನವರತಸಮ ಈ ಕಲಿ ಯುಗದಿ ಭಕ್ತರಿಗಾಲಿಂಗನೀಯುವ ನಿಗಮಗೋಚರ ವಿಠಲ ನಿನ್ನಡಿ 3 ಮಂದಹಾಸ ಮಂದರೋದ್ಧಾರ ಸುರಕಲ್ಪಧೇನು ಇಂದಿರೆಯರ ಪ್ರಾಣ ಮನೋಹರ ಹೇ ದೀನಬಂಧು ಸುಂದರಾಂಗ ಸುಗುಣಗುಣಹಾರ ಬಂಧನಿವಾರ ಸಿಂಧುಕಲಕಿದಪಾರ ಶೂರ ಕುಂದದೆ ಮೊರೆಕಾಯ್ದ ಸುರರ ಹೊಂದಿಭಜಿಸುವ ಭಕುತಜನಕಾ ನಂದ ನೀಡುತ ಚಂದನೋಡುತ ಸಿಂಧುನಿಲಯ ಮುಕ್ಕುಂದ ಮುರಹರಿ ಅಂದಮಾದ ವಿಠಲ ನಿಮ್ಮಡಿ 4 ಸುತ್ತಮುತ್ತ ಭಕ್ತರಾಲಯವು ಹಿಂಭಾಗದಲ್ಲಿ ಸತ್ಯಭಾಮ ರುಕ್ಮಿಣೀಕಾಂತನು ಮುಂಭಾಗದಲಿ ನಿತ್ಯನಿರ್ಮಲ ಚಂದ್ರಭಾಗಿನಿಯು ನಡುಮಧ್ಯ ರಂಗವು ಭಕ್ತಗೊಲಿದು ಭೂವೈಕುಂಠವ ಸತ್ಯವೆನಿಸಿ ಮೀರಿ ಮೆರೆವ ಭಕ್ತಜನರ ಕೈಯೆತ್ತಿ ಸಾರುವ ಪೃಥ್ವಿಗಧಿಕ ಮಹ ಪಂಢರಾಪುರ ಮುಕ್ತಿ ತವರೆಂಬ ಮಂದಿರದಲ್ಲಿ ಕರ್ತುಶ್ರೀರಾಮ ವಿಠಲ ನಿನ್ನಡಿ5
--------------
ರಾಮದಾಸರು
ನಿನ್ನ ಸೇರಿದೆ ಮಹಾಲಿಂಗ ಎನ-ಗಿನ್ಯಾರುಗತಿಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗಪ.ನಿನ್ನಂತೆ ಕೊಡುವ ಉದಾರ ತ್ರಿಭು-ವನ್ನದೊಳಿಲ್ಲದಕ್ಯಾವ ವಿಚಾರಮುನ್ನ ಮಾರ್ಕಾಂಡೇಯ ಮುನಿಯ ಭಯವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1ಸರ್ವಾಪರಾಧವ ಕ್ಷಮಿಸು ಮಹಾ-ಗರ್ವಿತರಾಶ್ರಯಕ್ಕೊಲ್ಲದು ಮನಸುಶರ್ವರೀಶಭೂಷ ನಿನ್ನ ಹೊರ-ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2ಅಂತರಂಗದ ದಯದಿಂದ ಯುದ್ಧ-ಮಂ ತೊಡಗಿದೆ ಪಾರ್ಥನೊಳತಿಚಂದಪಂಥದ ನೆಲೆಯನ್ನು ತಿಳಿದು ಸರ್ವ-ಮಂತ್ರಾಸ್ತ್ರಗಳನಿತ್ತೆಯೊ ಭಕ್ತಗೊಲಿದುದೊಡ್ಡದು ನಿನ್ನ ಬಿರುದು 3ಸಿದ್ಧಿಸು ಸರ್ವಸಂಕಲ್ಪ ಅಡ್ಡ-ಬಿದ್ದು ಬೇಡುವೆ ನಿನಗ್ಯಾವದನಲ್ಪಬುದ್ಧಿಯ ನಿರ್ಮಲಮಾಡು ನಿನ್ನಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು 4ಅಂಜಿಕೆ ಬಿಡಿಸಯ್ಯ ಹರನೆ ಪಾ-ವಂಜಾಖ್ಯವರಸುಕ್ಷೇತ್ರಮಂದಿರನೆಸಂಜೀವನ ತ್ರಿಯಂಬಕನೆ ನವ-ಕಂಜಾಕ್ಷ ಲಕ್ಷುಮಿನಾರಾಯಣಸಖನೆಸಲಹೊ ಪಂಚಮುಖನೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು