ಮಂಗಳ ಶ್ರೀ ಯತಿವರಗೆ ಮಂಗಳ ಶ್ರೀ ಹರಿಸುತಗೆ
ಶೋಣಿತ ಪುರಧೀಶÀಗೆ ಮಂಗಳ ಗುರುವರಗೆ ಪ
ಹರಿಸರ್ವೋತ್ತಮನೆಂದು ಪರಮ ಭಕ್ತಯಲಿಂದು
ಹರುಷದಿ ಶ್ರೀ ನರಹರಿಯನು ಖಂಬದಿ ತ್ವರದಲಿ ಕರೆದವಗೆ 1
ಪರಿಮಳ ಗ್ರಂಥವ ಮಾಡಿ ಹರಿಯ ಪಾದಕೆ ನೀಡಿ
ಪರಮ ಸುಧೀಂದ್ರರ ಕರದಲಿ ಯತಿ ಆಶ್ರಮ ಪಡೆದವಗೆ 2
ಭಕ್ತರ ಭಾಗ್ಯನಿಧಿಗೆ ನಿತ್ಯಸುಖಾ ಪಡೆದವಗೆ
ಮುಕ್ತಿಯ ದ್ವಾರವ ತೋರುವ ಗುರುರಾಘವೇಂದ್ರನಿಗೆ 3
ಕರುಣಾಸಾಗರನೀತಾ ಕರೆದಲ್ಲೆ ಬರುವಾತಾ
ಪೊರೆಯಂದೊದರಲು ಭಕ್ತರ ಪಿಡಿಯುವ ಮೀರದೇ ಕಾಯ್ವವಗೆ 4
ವರಧೀರ ಹನುಮೇಶವಿಠಲನಾ ನಿಜದಾಸಾ
ಸರಸದಿ ಅರ್ಚನೆಗೊಳ್ಳುವ ಮಂತ್ರಾಲಯ ಪುರವಾಸನಿಗೆ 5