ಒಟ್ಟು 7 ಕಡೆಗಳಲ್ಲಿ , 4 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುಭವ ಸ್ವಸಿದ್ಧವೊ ಅನುದಿನ ಶ್ರುತಿ ಖೂನ ಹೇಳುವ ಙÁ್ಞನವು ಧ್ರುವ ಗುಣಗುಣಕ್ಕೆ ಅಣುರೇಣು ವ್ಯಾಪಕ್ಕೆ ಜನವನ ಸ್ಥಾನ ಸುಸ್ಥಾನಕ್ಕೆ ಮನೋನ್ಮನಕ್ಕೆ ಙÁ್ಞನ ವಿಙÁ್ಞನಕ್ಕೆ ತಾನೆ ತಾನಾಗಿಹ್ಯದಕ್ಕೆ 1 ಅಖಿಳ ಭುವನಕ್ಕೆ ಸಕಲ ಸನ್ಮತಕ್ಕೆ ಪ್ರಕಟಗುಚಿತ ಪ್ರತ್ಯಕ್ಷಕ್ಕೆ ಶುಕಾದಿ ಮುನಿಗಳ ಮುಗುಟಮಣಿಯಾಗುದಕ್ಕೆ ಭಕ್ತವತ್ಸಲಾಗಿಹುದಕ್ಕೆ 2 ಇಹಪರ ಸಾಧನಕ್ಕೆ ಬಾಹ್ಯಾಂತರ ದೊರೆವುದಕ್ಕೆ ಸಾಹ್ಯಮಾಡುವ ಸಹಕಾರಕ್ಕೆ ಮಹಿಪತ್ಯುದ್ದೇಶಕ್ಕೆ ಸ್ವಹಿತ ಸುಪಥಕೆ ಶ್ರೇಯ ಸುಖದೋರುವಾಶ್ರಯಕ್ಕೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಕಾಯಲಾ ಭಕ್ತವತ್ಸಲಾ ಬಂದು ಒದಗಿ ನಿಂದು ಭಯವ ದೂರ ಮಾಡಲಾ ಧ್ರುವ ಮೊರಿಯು ಕೇಳೆಲಾ ಹರಿಯು ನಿಶ್ಚಲಾ ದುರಿತ ಹರಿಸೆಲಾ 1 ಸುಳವದೋರಲಾ ಹೊಳೆದು ವಿಠ್ಠಲಾ ಖಳರ ಕೈಯ ಸೆಳೆದುಕೊಂಡು ಬಲೆಯ ಬಿಡಿಸೆಲಾ 2 ಬಂಧುಬಳಗ ದೈವ ಕುಲಕೋಟಿ ನೀನೆಲಾ3 ಹಿಂದೆ ಶರಣರ ಬಂದು ಕಾಯ್ದೆಲಾ ಸಂದು ವಿಘ್ನದೊಳು ಬಂದು ರಕ್ಷಿಸಿದೆಲಾ 4 ಅಂದು ಒದಗಿ ನೀ ಬಂದ ಪರಿಯಲಾ ಇಂದು ಅಭಿಮಾನ ಕಾವ ಬಿರುದು ನಿನ್ನದಲ್ಲಾ 5 ದಾತ ನೀನೆಲಾ ಅಣುಗ ನಿನ್ನ ದಾಸನೆಂದು ಪ್ರಾಣನುಳುಹೆಲಾ 6 ಪುಣ್ಯಪ್ರಭೆಯಿಂದಾ ಕಣ್ಣುದೆರಿಯಲಾ ಧನ್ಯಗೈಸಿ ಮಹಿಪತಿ ಮಾತ ಮನ್ನಿಸೆಲಾ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶೋಭಾನ | ಶೋಭಾನವೆನ್ನಿರೆ ಸುರರಂಗನಿಯರೆಲ್ಲ ಶೋಭಾನವೆನ್ನಿ ಶುಭವೆನ್ನಿ ಪ ಶೃಂಗಾರದ ಗುಣನಿಧಿಯೆ ಬಾ | ಅಂಗಜಜನಕ ಅರವಿಂದದಾಳಾಕ್ಷನೆ ರಂಗಾ ಬಾ || ಭವಭವ ಭಂಗಾ ಬಾ | ದೇವೋತ್ತುಂಗಾ ಬಾ | ಜಗದಂತರಂಗಾ ಬಾ ಹಸೆಯ ಜಗುಲಿಗೆ1 ಪಂಕಜ ಸಂಭವನಯ್ಯ ಬಾ | ಕುಂಕುಮಾಂಕಿತನೆ ಭಕುತ ಕುಮುದ ಮೃಗಾಂಕ ಬಾ || ನಿಷ್ಕಳಂಕಾ ಬಾ ಶಂಖಚಕ್ರಾಂಕ ಬಾ | ಅಹಿಪರಿಯಂಕÀ ಬಾ ಹಸೆಯ ಜಗುಲಿಗೆ 2 ಸಾಮಜರಾಜಾ ವರದಾ ಬಾ | ಸಾಮವಿಲೋಲನೆ ಸದ್ಗುಣ ಶೀಲನೆ ರಾಮಾ ಬಾ || ರಣರಂಗಭೀಮಾ ಬಾ ಹಸೆಯಾ ಜಗುಲಿಗೆ 3 ಅಚ್ಯುತ ಉನ್ನತ ಮಹಿಮನೆ ಯಾದವ ಬಾ | ಘನ್ನ ಮೂರುತಿಯೆ ಸುಪ್ರಸನ್ನಾ ಬಾ ಸಚ್ಚರಿತಾ ಬಾ | ಭಾಗ್ಯ ಸಂಪನ್ನಾ ಬಾ ಜೀವರ ಭಿನ್ನಾ ಬಾ ಹಸೆಯಾ ಜಗುಲಿಗೆ 4 ನಾರಾಯಣ ದಶರೂಪಾ ಬಾ | ಚಾರುಚರಿತಾ ಪ್ರತಾಪ ಬಾ | ಶೌರಿ ಮುರಾರಿಯೆ ನಿಟಿಲ ಕಸ್ತೂರಿಯ ಲೇಪಾ ಬಾ || ನಿತ್ಯ ಸಲ್ಲಾಪಾ ಬಾ ನಮ್ಮ ಸಮೀಪ ಬಾ ಹಸೆಯಾ ಜಗುಲಿಗೆ 5 ವಾಸುದೇವ ಮುಕುಂದಾ ಬಾ | ಸಾಸಿರನಾಮ ಗೋವಿಂದಾ ಬಾ | ಕೇಶವ ಪುರುಷೋತ್ತಮ ನರಸಿಂಹ ಉಪೇಂದ್ರ ಬಾ || ಗೋಪಿಕಂದಾ ಬಾ | ಬಹುಬಲ ವೃಂದಾ ಬಾ | ಅತಿಜವದಿಂದಾ ಬಾ ಹಸೆಯಾ ಜಗುಲಿಗೆ 6 ಪರತತ್ವದಿ ಅತಿ ಚಿಂತಾ ಬಾ | ಪರಬೊಮ್ಮನೆ ಅತಿ ಶಾಂತಾ ಬಾ | ಪರಮಾತ್ಮನೆ ಪರಿಪೂರ್ಣ ವಿಭೂತಿವಂತಾ ಬಾ || ಅಖಿಳ ವೇದಾಂತಾ ಬಾ | ರುಕ್ಮಿಣಿಕಾಂತಾ ಬಾ | ಸದ್ಗುಣವಂತಾ ಬಾ ಹಸೆಯಾ ಜಗುಲಿಗೆ7 ತ್ರಿದಶಗುಣನುತ ವಿಲಾಸಾ ಬಾ | ಮಾಧವ ಶ್ರೀಧರನೆ ಸುನಾಸಾ ಬಾ || ಸಿರಿಮಂದಹಾಸಾ ಬಾ | ಭಕುತ ಉಲ್ಲಾಸಾ ಬಾ | ಶ್ರೀ ಶ್ರೀನಿವಾಸಾ ಬಾ ಹಸೆಯಾ ಜಗುಲಿಗೆ8 ಕೃಷ್ಣವೇಣಿಯ ಪಡೆದವನೆ ಬಾ | ರಥ ಹೊಡೆದವನೆ ಬಾ | ಕೃಷ್ಣೆಯ ಕಷ್ಟವ ನಷ್ಟ ಮಾಡಿದ ಕೃಷ್ಣಾ ಬಾ || ಯದುಕುಲ ಶ್ರೇಷ್ಠ ಬಾ | ಸತತ ಸಂತುಷ್ಟ ಬಾ | ಉಡುಪಿಯ ಕೃಷ್ಣ ಬಾ ಹಸೆಯಾ ಜಗುಲಿಗೆ 9 ಎಲ್ಲರೊಳಗೆ ವ್ಯಾಪಕನೆ ಬಾ ಬಲ್ಲಿದ ದೊರೆಗಳ ಅರಸನೆ ಬಾ | ನಾ ಎಲ್ಲಿ ನೋಡಲು ಪ್ರತಿಗಾಣೆ ನಿನಗೆ ಸಿರಿನಲ್ಲಾ ಬಾ || ಅಪ್ರತಿಮಲ್ಲ ಬಾ ಭಕ್ತವತ್ಸಲಾ ಬಾ | ವಿಜಯವಿಠ್ಠಲ ಬಾ ಹಸೆಯ ಜಗುಲಿಗೆ10
--------------
ವಿಜಯದಾಸ
ಸರಸಿಜನಾಭ ಪ. ಉಡುಪಿಯ ಕೃಷ್ಣನೇ ಅ.ಪ. ಏನು ಕಾರಣವನ್ನು ತೋರಿದ್ಪೊ ಶ್ರೀನಿವಾಸನೆ ನಿನ್ನ ಮಹಿಮೆಯ ಪೊಗಳಲು ನಾ ಶಕ್ತಳಲ್ಲಾ ಭಕ್ತವತ್ಸಲಾ 1 ನಿನ್ನ ನೋಡಿ ಧನ್ಯಳಾದೆನೊ ಸನ್ನುತಾಂಗನೇ ಎನ್ನ ಮೇಲೆ ಕರುಣವ ತೋರಿ ನಿನ್ನ ದರುಶನವಿತ್ಯೋ ದೇವಾ 2 ಮಾಡಿಸೊ ಧ್ವಂದ್ವಕಾರ್ಯ ನಿನ್ನದೆಂಬ ಸೊಲ್ಲ ಪಾಲಿಸು 3 ನಿನ್ನ ನಾಮದ ಸ್ಮರಣೆಯನ್ನು ಮರಿಯದೆ ನುಡಿಸೆನೆಗೆ ಕರುಣಾನಿಧಿಯೇ4 ನಿನ್ನ ಪಾದದ ಧ್ಯಾನವು ನಿರಂತರವಿರಲೆನೆಗೆ ನಿನ್ನ ಕಡೆಯಾಕಣ್ಣಲಿ ನೋಡೊ ರಮಾವಲ್ಲಭವಿಠಲನೆ ಕರುಣದಿ5
--------------
ಸರಸಾಬಾಯಿ
ಸಿರಿ ನರಸಿಂಗನ ಪಾಡಿರೊ | ಮಂಗಳಮೂರುತಿ ಡಿಂಗರಿಗರ ಹೃಸ್ಸಂಗ ಕರುಣಾತರಂಗಾ ಪ ಮೊರೆಯಿಡಾ ಬಂದ | ಕಂಭದೊಳಿಂದ | ಲೋಕಸ್ವಾಮಿ | ಅಂತರ್ಯಾಮಿ || ಕರುಳಮಾಲೆ ಇಟ್ಟಾ | ಕೊರಳೊಳು ದಿಟ್ಟಾ | ಜಯವೆನುತಿರೆ ಮೆರೆದಾ | ಪ್ರಹ್ಲಾದವರದಾ 1 ಕೊಡುವನು ಚಲುವಾ | ಭಕುತರಿಗೊಲಿವ | ಹರಿ ನಮಗೆಲ್ಲಾ | ಭಕ್ತವತ್ಸಲಾ || ಗುಣಾಂಬುಧಿ ತೇಜ | ರಾಜಾಧಿ ರಾಜ | ಕರ್ತನು ಸಖ್ಯ 2 ಕನಕಮುನೀಶ್ವರ ತಪವನು ಮಾಡಲು ಮೆಚ್ಚಿ | ಬಂದನು ಮೆಚ್ಚಿ | ಕನಕ ವರುಷವನು ಗರೆವದು ಅಂದಿನ ದಿನದಿ | ಆನಂದವನಧಿ | ಕನಕ ನೃಕೇಸರಿ ಎನಿಸಿದಾ ಅಂದಿನಾರಭ್ಯಾ | ಈತನೆ ಸಭ್ಯಾ | ನುತಿಸಲು ಸುಳಿವಾ 3 ಇದು ಪುಸಿಯಲ್ಲಾ | ವೇದಾ | ಪೇಳ್ವದು ಮೋದಾ || ಅವನೇ ದನುಜಾ | ನಮಗೀತ ತಂದೆ 4 ನಿಧಿಯೊಳು ಧನದಾ | ದಿಕ್ಕಿಲಗಾಧಾ | ಮುನಿಜನ ಸಮ್ಮತ ಶ್ರುತಿ ಉಕ್ತಿಗಳಲ್ಲಿ ಅಕ್ಕು | ಕೇಳೀವಾಕು | ಮಾಡಲು ಭಕುತಿ | ಉಂಟು ವಿರಕುತಿ | ವಿಠ್ಠಲ ನರಸಿಂಗಾ | ರಿಪುಗಜ ಸಿಂಗಾ 5
--------------
ವಿಜಯದಾಸ
ಹರಿಮಣಿವರ್ಣ ವಿಠ್ಠಲಾ ನಿನ್ನವನೊ ಪರಮ ಪ್ರೀತಿಯಿಂದ ಪಾಲಿಸ ಬಾರಯ್ಯ ಪ ಪಂಕಜ ದಳ ಕೂಡಿತು ನೋಡು ಮುದರಿಕೊಂಡವು ಕುಮುದವೆಂಬೊ ಕಣ್ಣು ಪದುಮನಾಭನೆ ನಿನ್ನ ನಖವೆಂಬೊ ರವಿ ವದನವೆಂಬೊ ಚಂದ್ರÀಮಾ ಉದಿಸಲಿ 1 ಬಿರಿದಾಗಿ ಕಿವಿ ಎಂಬೊ ಮನೆ ಇಪ್ಪವು ಸ್ಪರಿಶ ಮಾಡುವೆನೆಂದು ಕಲಿ ಸುಳಿದಾ ಕರ್ಣ ಮಂದಿರವೆ ತುಂಬಲಿ ಕಲಿ ಅಡಗಿ ಪೋಪಾ 2 ನಾಸಾ ದುರ್ವಾಸನೆಗೆ ಇಚ್ಛೆ ಮಾಡಿತು ಹೇಸಿಗೆ ರಸಗಳಿಗೆ ಜಿವ್ವೆ ಪೋಗುದದು ಪೂಸಿದಾ ಗಂಧ ದಿವ್ಯವಾಸನೆ ಬರಲಿ ಲೇಸು ನಿನ್ನ ನಾಮರಸ ಸುರಿಸುವಂತೆ ಮಾಡು3 ನೀನಲ್ಲದೆ ತುಲಾ ಕಾವೇರಿಯೊಳಗೆ ಸ್ನಾನ ಜಪ ತಪಗಳು ಮಾಡುವದೇಕೆ ಸಿರಿ ಪ್ರಾಣರಿಗೆ ಪ್ರಾಣನಾದ ಬಲು ಮೋಹನಾ 4 ಈ ಕ್ರೋಧನಾಬ್ಧ್ದ ಆಶ್ವಿಜ ನಿನ್ನ ಪಕ್ಷದ ಏಕಾದಶಿ ರಾತ್ರಿಯೊಳು ಬಾ ಹೃದಯದೊಳಗೆ ಯಾಕೆ ಕೂಡದಯ್ಯ ಜೀಯಾ ಪೇಳೊ ಎನ್ನೊಡಿಯ ಲೋಕ ಚರಿಸುವದೇನು ನಿನ್ನ ಪೋಗಾಡಿ 5 ಧವಳಗಂಗಿಯೊಳಂದು ಬಿದ್ದು ಬಂದಾಗ ಕವಿ ವಾದಿರಾಜಗೊಲಿದು ಬರಲಿಲ್ಲವೇ ಅವರ ದಾಸಾನುದಾಸನು ಸತತ ನಾನು ತವಕದಿಂದಲಿ ಬಾರೊ ಭಕ್ತವತ್ಸಲಾ6 ಅರ್ಚಿಸಬಲ್ಲನೆ ದೇವ ನಿನ್ನನುದಿನಾ ಗಚ್ಚರಿತವಂದಲ್ಲವೆ ಮತ್ತಾವದರಿಯೆ ಅಚ್ಯುತದಾಸರ ಪ್ರೀಯ ವಿಜಯವಿಠ್ಠಲ ಬೆಚ್ಚಿಸಿದೋಪಾದಿಯಲ್ಲಿ ಪೊಂದಿ ಬಾರಯ್ಯ 7
--------------
ವಿಜಯದಾಸ
ರಕ್ಷೀಸಬೇಕೆಮ್ಮನನುದಿನದಲ್ಲಿ |ಪಕ್ಷಿರಾಜನೆ ಹರೀಸ್ಯಂದನಾ ಸ್ವಾಮಿ ಪಇಂದ್ರಲೋಕಕ್ಕೆ ಪೋಗಿ ಕಲಹ ಮಾಡಿಪೀಯೂಷ|ತಂದನುಜರಿಗಿತ್ತ ಧೀರನೆ |ಸಿಂಧೂವಿನೊಳಗಿದ್ದಕೂರ್ಮಗಜಮಂದಿಯಾ |ತಿಂದು ದಕ್ಕಿಸಿಕೊಂಡ ವೀರನೇ 1ಪಾದಪ ಮುರಿದು ವಾಲಖಿಲ್ಲ್ಯೆರ ಪೋಷಿಸಿ |ಮೋದದಿಂದ ವರವು ಪಡಿಯೋ ||ಮಾಧವನಂಘ್ರಿ ಕಮಲದೊಳಗೆ ಇಟ್ಟ |ಹೇ ದಯಾಂಬುಧಿ ನಿನಗೆಣೆ ಯಾರೋ 2ಅರುಣಾನುಜ ಮಾತೆಯ ಬಯಕೆ ಪೂರೈಸೀದ |ಪರಮಸಮರ್ಥ ಭಕ್ತವತ್ಸಲಾ ||ಉರಗಾಶನನೆ ನಿನ್ನ ಪ್ರಾರ್ಥಿಸುವೆನುನಿತ್ಯ|ಹರಿಸೇವೆ ವಿನಹ ಮತ್ತೊಂದೊಲ್ಲೆನೊ 3ಪ್ಲವಗರ ಪಾಲಿಸಿದೆ ರಘುಜಾನ ಒಲಿಸಿದೆ |ತವಕಬಲಿವೈದ ಮುಕುಟ ತಂದೆ ||ದಿವಿಜರಿಗೆ ಸಹಾಯವಾದೆ ವಿಪ್ರರ ಕಾಯ್ದೆ |ಅವರಾರೇನರಿಯರೊ ನಿನ್ನ ಲೀಲೆ 4ಶ್ರೀನಾಥನ ಪಾದಾಬ್ಜದಲ್ಲಿನಿರತಮನ |ತಾನಿರುವಂತಾಗಲಿ ಖೇಚರಾ ||ಮೌನಿ ಕಶ್ಯಪ ಜಾತಾ ಲಾಲಿಸುವದೆನ್ನ ಮಾತಾ |ಪ್ರಾಣೇಶ ವಿಠಲನ ನಿಜದೂತ 5
--------------
ಪ್ರಾಣೇಶದಾಸರು