ಪಾಲಯಮಾಂ ಪಾರ್ವತಿಯೆ ಪಾಪ ವಿನಾಶಿನಿ ತಾಯೆ
ಶೀಲ ಮೂರುತಿ ಶಿವೆ ಈ ಜಾಲ ಸಂಸಾರದಿ ಪ.
ತ್ರಿಜಗ ಪೂಜಿತೆ ನಿನ್ನ
ಭಜಿಸೂವಾಮನವಿತ್ತು ಸುಜನರಾಪ್ತೆಯೆ ಎನ್ನಾ 1
ರಾಗ ರಾಗದಿ ನಿನ್ನ ಅನುರಾಗದಿಂ ಪೂಜಿಪೆ
ಭಾಗ್ಯವನು ಕೊಟ್ಟು ನೀ ವೈರಾಗ್ಯ ಭಕ್ತಿಯನು 2
ಅರಿಶಿಣ ಕುಂಕುಮವನ್ನು ವರ ಮಾಂಗಲ್ಯದಾ ಭಾಗ್ಯ
ನಿರುತದಿ ನೀಡುತ ಪೊರೆಯೆ ಶ್ರೀ ಶ್ರೀನಿವಾಸ ಸಹೋದರಿಯೆ3