ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೈಷ್ಣವನಾರೆಂದು ದೃಷ್ಟಿಸಿ ಸೃಷ್ಟಿಯೊಳು ವಿಷ್ಣುನರಿತವನೆ ವೈಷ್ಣವನು| 1 ಭಕ್ತಿರಸದೊಳು ಮುಣುಗಿ ಭಕ್ತಿಗೈದುವ ಗತಿಯ ಯುಕ್ತಿ ತಿಳಿದವನೆ ವೈಷ್ಣವನು 2 ಹರಿ ಪರಂದೈವೆಂದು ಹರಿಯ ಕೊಂಡಾಡುತಲಿ ಹರಿಯ ನೆನೆಯುವನೆ ವೈಷ್ಣವನು 3 ಹರಿ:ಓಂ ತತ್ಸದಿತಿಯೆಂಬ ಹರಿವಾಕ್ಯವನು ಅರಿತವನೆ ಪರಮ ವೈಷ್ಣವನು 4 ಹರಿಧ್ಯಾನ ನೆಲೆಗೊಂಡು ಹರಿನಾಮ ಬಲಗೊಂಡು ಹರಿಯ ಸ್ಮರಿಸುವವನೆ ವೈಷ್ಣವನು 5 ಪರದೆ ಇಲ್ಲದೆ ಪಾರ ಬ್ರಹ್ಮಸ್ವರೂಪನು ಗುರುತ ಕಂಡವನೇ ಪರಮ ವೈಷ್ಣವನು6 ಗುರುಕೃಪೆಯಿಂದ ಪರಗತಿ ಸಾಧನವು ಮುಟ್ಟಿ ಅರಿತು ಬೆರೆದನೆ ಪರಮ ವೈಷ್ಣವನು 7 ಮೂಲ ಮೂರುತಿಗ್ಯಾಗಿ ಮೇಲಗಿರಿಯನೇರುವ ಕೀಲ ತಿಳಿದವನೆ ವೈಷ್ಣವನು 8 ಉಂಟಾಗಿ ಇರುಳ್ಹಗಲಿ ಗಂಟ್ಹಾಕಿ ಹರಿಪಾದ ಬಂಟನಾದವನೆ ವೈಷ್ಣವನು 9 ಕಂಟಕ ನೀಗಿ ಮೂರು ಬಲೆಯನು ದಾಟಿ ಮೀರಿ ನಿಂದವನೇ ವೈಷ್ಣವನು 10 ಆಶಿಯನೆ ಜರಿದು ನಿರಾಶೆಯನು ಬಲಿದು ಹರಿದಾಸನಾದವನೆ ವೈಷ್ಣವನು 11 ದ್ವಾದಶನಾದವನು ಸಾಧಿಸಿ ಕೇಳುತಲಿ ಭೇದಿಸಿದವನೆ ವೈಷ್ಣವನು 11 ಅನುದಿನ ಘನಸುಖವು ಅನುಭವಿಸುವನೆ ವೈಷ್ಣವನು 12 ವಿಷ್ಣುಭಕ್ತಿಯ ಸುಖವು ಮುಟ್ಟಿ ಮುದ್ರಿಸಿ ಪುಷ್ಟವಾಗಿದೋರುವನೆ ವೈಷ್ಣವನು 13 ವಿಷ್ಣುಮೂರ್ತಿಯ ಧ್ಯಾನ ದೃಷ್ಟಾಂತ ಮಹಿಪತಿಗೆ ಕೊಟ್ಟಾ ಗುರು ಪರಮ ವೈಷ್ಣವನು 14
--------------
ಕಾಖಂಡಕಿ ಶ್ರೀ ಮಹಿಪತಿರಾಯರು
212ತುಂಗೆ ಮಂಗಳತರಂಗೆ-ಹರಿಸರ್ವಾಂಗೇ |ಜಯಜಯ ಜಯತು ತುಂಗೆ ಪಆದಿಯಲೊಬ್ಬ ದೈತ್ಯ ಮೇದಿನಿಯಕದ್ದೊಯ್ದ |ಸಾಧಿಸಿ ರಸಾತಳದಲ್ಲಿರಿಸೆ ||ಭೇದಿಸಿದವನ ನಾಸಿಕದಲ್ಲಿ ಪುಟ್ಟಿದೆ |ಆದಿವರಾಹನ ದಾಡೆಯಲಿ ಬಂದೆ ದೇವಿ 1ಜಲವೆಲ್ಲ ಹರಿಮಯ, ಶಿಲೆಯೆಲ್ಲ ಶಿವಮಯ |ಮಳಲುಮಿಟ್ಟೆಗಳೆಲ್ಲ ಮುನಿಮಯವು ||ಬೆಳೆದ ದರ್ಭೆಗಳು ಸಾಕ್ಷಾತು ಬ್ರಹ್ಮಮಯ |ನಳಿನನಾಳವು ಸರ್ವ ವಿಷ್ಣುಮಯ 2ಇದೆ ವೃಂಧಾವನ, ಇದೆಕ್ಷೀರಾಂಬುಧಿ|ಇದೆ ವೈಕುಂಠಕೆ ಸರಿಮಿಗಿಲೆನಿಸಿದೆ ||ಇದೆ ಬದರಿಕಾಶ್ರಮ, ಇದೆ ವಾರಣಾಸಿಗೆ,ಅಧಿಕವೆಂದೆನಿಸಿದೆ ದೇವಿ ತುಂಗೆ 3ಧರೆಗೆ ದಕ್ಷಿಣವಾರಣಾಸಿಯೆಂದೆನಿಸಿದೆ |ಪರಮಪವಿತ್ರ ಪಾವನ ಚರಿತ್ರೆಯು ನಿನ್ನ ||ಸ್ಮರಣೆಮಾತ್ರದಿ ಕೋಟಿ ಜನ್ಮದಘವನಳಿವ |ಪರಮಸಾಯುಜ್ಯದ ಫಲವೀವ ದೇವಿ4ಪರಮಭಕ್ತ ಪ್ರಹ್ಲಾದಗೊಲಿದು ಬಂದ |ಪರಮನರಸಿಂಹಕ್ಚೇತ್ರವೆಂದೆನಿಸಿ ಮೆರೆದೆ ||ಧರೆಯೊಳಧಿಕವಾದ ಕೂಡಲಿ ಪುರದಲಿ |ವರದಪುರಂದರವಿಠಲನಿರಲು ಬಂದೆ5
--------------
ಪುರಂದರದಾಸರು