ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಲಭಯಾನೆ ಕಂಜಲೋಚನೆ ಕದವತೆಗೆಯೆಲೆ ಭಾಮಿನಿ ನಾಂ ಬಳಲಿ ಬಂದೆನು ಭಾಮಿನೀ ಪ. ಬಳಲಿ ಬಂದರೆ ಒಳ್ಳಿತಾಯಿತು ತಳರ್ವುದಿಲ್ಲಿಂ ನಿಲ್ಲದೆ ನಾಂ ಕದವ ತೆಗೆಯೆನು ಸಾರೆಲೆ ಅ.ಪ. ಭಾಪುಭಾಪೆಲೆ ಕೋಪಗೈವುದು ಚಾಪಲ್ಯಾಂಬಕಿ ಯೆನ್ನೊಳು ಓವನಲ್ಲೇ ಕೋಪಸಲ್ವುದೆ ಈ ಪರಿಯೊಳ್ ಪೇಳ್ವುದು ನೀ ನೀಪರಿಯೊಳ್ ಪೇಳ್ವುದು 1 ಪರಿ ಕಪಟನಾಟ್ಯವ ಮಾಳ್ಪರೇ ಓಪೆÀನೆಂದು ಕೂಗುತಿರುವ ಭೂಪನಾವನು ಸಾರೆಲೋ ನಾನೋಪೆ ಯಾರಿಗೆ ಸಾರೆಲೊ 2 ನೀರೆ ಮುಕ್ತಾಹಾರೆ ಸ್ಮರವೈಯ್ಯಾರೆಯಿಂತು ಪೇಳ್ವರೇ ಕೇಳ್ ನೀರನಾನೆಲೆ ಶ್ರೀಕರೆ 3 ನೀಂ ಜಾರನಂದದಿ ಕಾಣುವೆ ನೀನಾರು ಪೇಳು ನೋಡುವೆ 4 ದೇವಿಕೇಳು ವಸುದೇವ ದೇವಕಿಕುಮಾರ ನಾನೆಲೆ ಭಾಮಿನೀ ಸುಕುಮಾರನಾನೆಲೆ ಭಾಮಿನೀ ಭಾವಜಾತನ ಬಾಣಕೀಯದೆ ಕಾವುದೆನ್ನನು ಕಾಮಿನೀ ದಯೆತೋರು ಮನೋಮೋಹಿನೀ5 ದೇವಕೀಸುತನಾದರೊಳ್ಳಿತು ನಾವು ಬಲ್ಲೆವು ಸಾರುನೀಂ ಮಾವನನ್ನೆ ಮಥಿಸಿ ಬಂದ ಮಹಾಮಹಿಮನೆ ಸಾರು ನೀಂ, ಆಹ ಭಾವಿಸೀ ಭಯಪಡುವೆನೇಂ 6 ಭೀಷ್ಮಕಾತ್ಮಜೆ ಭೇಷಜಾಂಬಕಿ ಹಾಸ್ಯ ಮಾಡದೆ ಬೇಗನೆ ನಾಂ ಬೇಡಿಕೊಂಬೆನು ನಿನ್ನನು 7 ದೋಷವೆಣಿಸದೆ ಪೋಷಿಸೆನ್ನ ಮದೀಶ ಹಾಸ್ಯವ ಮಾಡಿದೆ ಶೇಷಶೈಲನಿ ವಾಸ ಎನ್ನನು ಪೋಷಿಸೆಂದಳು ವಿನಯದಿ ಕೈಪಿಡಿದ ದೇವನ ಮೋದದಿ 8 ಜಯಜಗನ್ನಾಥ ಭಕ್ತಾಭಯಪ್ರದ ಶ್ರೀಕರ ಜಯದೇವ ದಯಾಸಾಗರ ಶೇಷಗಿರೀಶ ಶ್ರೀಧರ 9
--------------
ನಂಜನಗೂಡು ತಿರುಮಲಾಂಬಾ
ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು
ವೈದೇಹೀರಮಣನೆ ನಮೋ ನಮೋ ಪ. ವಿಶ್ವ ಭದ್ರಾದ್ರೀಶ ಲೀಲಾಮಾನುಷ ಅ.ಪ ಜಯ ರಾಮಚಂದ್ರ ಕೌಶೇಯ ಪೀತವಾಸಶೋಭಿತ 1 ದುಷ್ಟದಾನವಾಂತಕ ನಮೋ ನಮೋ ಶಿಷ್ಟರಕ್ಷಕ, ದೃಷ್ಟಿಸೆನ್ನ ಸೃಷ್ಟಿಕರ್ತನೆ ಇಷ್ಟಾರ್ಥಗಳ ನೀ ಕೊಟ್ಟು ರಕ್ಷಿಸೈ 2 ಶ್ರೀಶೈಲವರದನೇ ನಮೋ ನಮೋ ಶೇಷಶಯನ ಕ್ಲೇಶನಾಶನ ಭೇಷಜಾನನ ಶ್ರೀಶ ಸರ್ವೇಶ ನಿತ್ಯನಿರಂಕುಶ 3
--------------
ನಂಜನಗೂಡು ತಿರುಮಲಾಂಬಾ