ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಶೆ ಅಳಿಯದೆ ಮನದ ರೋಷವಡಗದೆ | ವೇಷ ದಂಭಕಗೆಲ್ಲಿ ಶಿವಯೋಗವು ಪ| ತನ್ನ ತಾನರಿಯದೆ ಉನ್ಮತ್ತದಿಂದಲಿ ನನ್ನದು ನಾನೆಂದು ಜಲ್ಪಿಸುತ || ಕುನ್ನಿಯಂದದಿ ಕೋಟಲೆ ಯೊಳಗಿಹ ಹೀನ ಮನುಜಗೆಲ್ಲಿ ಶಿವಯೋಗವು 1 ಎಲಬು ತೊಗಲು ಮಲ ಮೂತ್ರದಿ ತೋರುವ | ಹೊಲಸಿನ ದೇಹವು ತಾನೆನುತ || ಹಲವು ಪಾಪಂಗಳನು ಹೇಸದೆ ಮಾಡುವ | ಕುಲಹೀನನಿಗೆಲ್ಲಿ ಶಿವ ಯೋಗವು 2 ಆರು ವೈರಿಗಳಿಗೆ ವಶವಾದನು ಈ ದೀನ | ವಾರಿಜನಾಭನ ಚರಣವನು || ಸೇರಿ ತನ್ನ ಹಿತವ ಮಾಡಿಕೊಳ್ಳದಾ- |ಚಾರಿಗೇಡಿಗೆಲ್ಲಿ ಶಿವ ಯೋಗವು 3 ಮೂರು ದೇಹಕೆ ಮೀರಿ ಬೇರೆ ತಾನಾಗದೆ | ಆರು ಇಂದ್ರಿಯಗಳಿಗೆ ವಶವಾಗಿಯು || ನಾರಿಯರ ಸಂಗ ಸುಖವ ಬಯಸುವ | ಕ್ರೂರ ಮನುಜನಿಗೆಲ್ಲಿ ಶಿವ ಯೋಗವು 4 ಶ್ರೀ ಗುರು ವಿಶ್ವಪತಿಯ ಪದ ಕಮಲವ | ಬೇಗದಿ ಸೇರಿ ಸುಖಿಯಾದೆ || ರಾಗರೋಷದಿ ತನ್ನಾಡಿತವ ತಾ ಮರೆತಂಥ | ಭೋಗಲಂಪಟಗೆಲ್ಲಿ ಶಿವಯೋಗವು ? 5
--------------
ನರಸಿಂಹ
ಭಾಗ್ಯ ಬೇಕೈ ಗುರುವೇ ಬೋಧವ ಕೇಳೆ ಭಾಗ್ಯ ಬೇಕೈ ಜೀವಿಗೆ ಭಾಗ್ಯದ ಹೊರತಾಗಿ ಬೋಧ ಭೋಗಲಂಪಟ ಭವ ರೋಗಿಗೆ ದೊರಕೀತೆ ಪ ಮಾನವಜನ್ಮವ ತಾಳೆ ಬೇಕೆಲೋ ಭಾಗ್ಯ ಹೀನಬಾಳುವೆ ಬೇಸರಾಗೆ ಬೇಕೆಲೋ ಭಾಗ್ಯ ಜ್ಞಾನಿಯ ದರುಶನವಾಗೆ ಬೇಕೆಲೋ ಭಾಗ್ಯ ತಾನು ತನ್ನಯ ನಿಜವ ತಿಳಿಯೆ ಪರಮ ಭಾಗ್ಯ 1 ಬಾಳಿನ ಸುಖಕಾಗಿ ಆಳಾಗಿ ದುಡಿವಂಗೆ ಕೀಳುತನದಿ ಜ್ಞಾನವಲ್ಲಗಳೆಯುವಗೆ ಮೇಲು ತಾನೆಂದು ತಿಳಿದೋಡಾಡುವವನಿಗೆ ಕಾಲನಂಜಿಕೆ ಕಳೆವ ಬೋಧವು ತಿಳಿವೊಡೆ 2 ಏನಾದೊಡೇನಯ್ಯ ಎನ್ನ ಪೂರ್ವದಭಾಗ್ಯ ನಾನಾದೆ ದೇವನು ಗುರು ನೀನೇ ಯೋಗ್ಯ ಹೀನರ ಕೊಂಡೇನು ನಾನೊಂದು ಪಾರಾದೆ ಜ್ಞಾನಿಶಂಕರನೆ ನಾನಾದೆ ಎನ್ನಯ ಭಾಗ್ಯ 3
--------------
ಶಂಕರಭಟ್ಟ ಅಗ್ನಿಹೋತ್ರಿ