ಕಂಸಾರಿನಿಜಪಾದ ಮರೆಯದಿರೆಲೆ ಮನವೆ
ಸಂಸಾರಸುಖ ನೆಚ್ಚಿ ಭ್ರಮೆಯೊಳಗೆ ಬಿದ್ದು ಪ
ಜನನಿಜನಕರುವನಿತೆತನುಜನುಜರಿವರೆಲ್ಲ
ನಿನಗ್ಹಿತದಶತ್ರೆಂದು ನೆನೆಸಿಕೊಳ್ಳದಲೆ
ಅನುದಿನವು ದುಡಿದುಡಿದು ತನುಮನಧನವನಿತು
ಬಿನುಗರಿಗೆ ಸಲಿಸಿ ನರಕಕುಣಿಯೊಳಗೆ ಬಿದ್ದು 1
ಹೊಲಸುಕಿಲ್ಬಿಷಮಾಂಸ ಮೇಲೆ ಚರ್ಮದ ಹೊದಿಕೆ
ಬಲವಾಗಿ ಬಿಗಿದ ನರ ಎಲುವಿನ್ಹಂದರವು
ತೊಳೆಯದಿರ್ದರೆ ನಿಮಿಷ ಹೊಲಸುನಾರುವ ಮಹ
ಮಲಭಾಂಡಕ್ಕೊಲಿದು ಬಲು ಸಿಲುಕಿ ಬಂಧದೊಳು 2
ಜಡದಮೇಲಣ ಲಿಪಿಯು ಒಡನೆ ಮಾಯಪ್ಪಂತೆ
ಪೊಡವಿಯ ಸುಖ ನಿಮಿಷದಡಗಿ ಪೋಗುವುದು
ಅಡಿಗಡಿಗೆ ಎಡೆಬಿಡದೆ ಒಡೆಯ ಶ್ರೀರಾಮನಲಿ
ದೃಢವಾಗಿ ನೆರೆನಂಬಿ ಪಡಕೋ ನಿಜಸುಖವ 3