ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ ಪ ವಾಸುದೇವನ ಭಜಿಸೊ ಒರಟು ಜೀವನವೆ ಅ ನೆಂಟರೂರಿಗೆ ಹೋಗಿ ನಾಲ್ಕು ದಿವಸವಿದ್ದರೆಎಂಟು ದಿನದಾಯಾಸ ಅಟ್ಟಬಹುದೊಉಂಟು ಸೌಭಾಗ್ಯವೆಂಬ ಧೈರ್ಯವ ಬಿಟ್ಟು ವೈ-ಕುಂಠವಾಸಿಯ ಭಜಿಸೊ ತುಂಟ ಜೀವನವೆ1 ಮಾಯಾ ಸಂಸಾರಕ್ಕೆಸಡಗರವಗೊಂಡು ಬರಿದೆ ಭ್ರಮಿಸಲೇಕೆಬಿಡದೆ ಯಮನಾಳುಗಳು ಬಾರೆಂದು ಎಳೆವಾಗಮಡದಿ ಮಕ್ಕಳು ಬಹರೆ ಭಂಡ ಜೀವನವೆ2 ಇಷ್ಟ ಸಂಪತ್ತನ್ನು ಬಡವರಾ ಕರೆತಂದುಕೊಟ್ಟು ಮಾಡಿದ ಪುಣ್ಯಫಲ ತನ್ನದೊಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಮನದಲಿ ಭಜಿಸೊ ಭ್ರಷ್ಟಜೀವನವೆ3
--------------
ಕನಕದಾಸ