ಹರಿಪಾದಕಮಲಕ್ಕೆ ಮರೆಹೊಕ್ಕ ಬಳಿಕ
ಮರಮರ ಮರುಗುವ ಪರಿಯು ಇನ್ನ್ಯಾಕೋ ಪ
ಪರಮಪಾವನ ತನ್ನ ಚರಣದಾಸರ ಸ್ಥಿತಿ
ಅರಿಯನೆನೆನ್ನುತ ಸ್ಥಿರವಾಗಿ ನಂಬಿ ಅ.ಪ
ಕಂತುಪಿತನಧ್ಯಾನ ಚಿಂತಾಮಣಿಯೆಂದು
ಚಿಂತಾದೂರನ ನಿಜಸ್ಮರಣೆಯೇ ಪರಷೆಂದು
ಸಂತರೊಡೆಯ ಶ್ರೀಕಾಂತನ ಭಜನೆಯೇ
ಭ್ರಾಂತಿನೀಗಿಸುವಂಥ ಕಲ್ಪತರುವಿದೆಂದು 1
ಸೃಷ್ಟಿಕರ್ತನ ಕಥನ ಕಷ್ಟನಿವಾರಣ
ಅಷ್ಟಮೂರುತಿ ಕೀರ್ತನಷ್ಟಸಂಪದ ಪೂರ್ಣ
ಎಷ್ಟು ಮಾತ್ರಕೆ ತನ್ನ ಇಷ್ಟ ಭಕ್ತರಿಗಿಹ್ಯ
ಕಷ್ಟ ನಿವಾರಿಸಿದೆ ಬಿಡನೆಂದು ಗಟ್ಟ್ಯಾಗಿ 2
ಧ್ಯಾನಮೂರುತಿ ಎನ್ನ ಮಾನಾಪಮಾನವು
ನಿನ್ನಗೆ ಕೂಡಿತು ಎನಗಿನ್ನೇನೆಂದು
ಅನ್ಯಾಯವನು ತ್ಯಜಿಸಿ ಧ್ಯಾನವ ಬಲಿಸಿ
ಜಾನಕೀಶನೆ ಭಕ್ತಧೇನು ಶ್ರೀರಾಮೆಂದು 3