(ಚಿತ್ರಾಪುರದ ದುರ್ಗಾ)
ಚಿತ್ರಾಪುರ ನಾಯಕಿ ಪಾಲಿಸು ನಮ್ಮ
ಗೋತ್ರ ವೃದ್ಧಿದಾಯಕಿ
ಭ್ರಾತ್ರವ್ಯ ಭಯದಿಂದ ಭಜಿಸಿದ ವಿಧಿಯ
ಸ್ತೋತ್ರಕೊಲಿದ ಮೊದಗಾತ್ರದೇವನ ರಾಣಿ ಪ.
ಸರ್ವಮಂಗಲೆ ನಿನ್ನನು ಕಾಣಲು ಕಷ್ಟ
ಪರ್ವತ ಪುಡಿಯಾದುದು
ಶರ್ವ ಸುರೇಂದ್ರಾದಿ ಗೀರ್ವಾಣವಂದ್ಯೆ ನೀ
ನಿರ್ವಹಿಸುವುದೆನ್ನ ಸರ್ವಕಾರ್ಯಗಳನ್ನು 1
ಕ್ಷುದ್ರರ ಮೋಹಿಸಲು ಹರಿಯು ನಿದ್ರಾ
ಮುದ್ರೆಯ ಧರಿಸಿರಲು
ರೌದ್ರ ರಕ್ಕಸ ಮಧುಕೈಟಭರನು ಕರು-
ಣಾದ್ರ್ರ ಹೃದಯದಿಂದ ಕೊಲಿಸಿದ ಪತಿಯಿಂದ 2
ವಹಿಸಿದೆ ಸಕಲವನ್ನೂ
ಸಹಿಸದ ಶತ್ರು ಪುಂಜಗಳನ್ನು ತ್ವರಿತದಿ
ದಹಿಸು ದಾಸನೆಂದು ಗ್ರಹಿಸೆನ್ನ ಪಾಲಿಸು 3
ಚಂಡಮುಂಡರ ಶಿರವ ಕತ್ತರಿಸುತ
ಚಂಡನಾಡಿದ ಭರವ
ಕಂಡು ಮನಕೆ ರೋಷಗೊಂಡು ದೈತ್ಯರ ರಕ್ತ
ಹಿಂಡಿ ದೇಹವ ತುಂಡು ತುಂಡು ಮಾಡಿದ ಧೀರೆ 4
ತಪ್ಪುಗಳೆಣಿಸದಿರೇ ಶೇಷಾದ್ರೀಶ-
ನೊಪ್ಪಿದ ಗುರುವ ತೋರೆ
ಅಪ್ಪಿಳಿಸರಿಗಳ ಚಿಪ್ಪನುಳಿಯದಂತೆ
ತಪ್ಪಿಸು ಭಯವ ತಿಮ್ಮಪ್ಪನ ರಾಜನ ನೀರೆ 5