ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೀರ್ಥಯಾತ್ರೆ ಎಂಬುದು ಇದೆ ನೋಡಿ ಪಾದ ಕೂಡಿ ಧ್ರುವ ಭ್ರೂಮಧ್ಯವೆಂಬುದಿದೆ ಕಾಶಿ ಬ್ರಹ್ಮಸುಖ ತುಳುಕುತಿದೆ ಸೂಸಿ ನೇಮದಿಂದಲಿ ನೋಡಲು ಧ್ಯಾನಿಸಿ ಕರ್ಮಪಾಶ ಹೋಯಿತು ಛೇದಿಸಿ 1 ತ್ರೀವೇಣಿ ಸಂಗಮ ಸುಕ್ಷೇತ್ರ ಜೀವ ಪ್ರಾಣ ಮಾಡಿತು ಪವಿತ್ರ ದಿವ್ಯ ದೇಹವಾಯಿತು ಸರ್ವಗಾತ್ರ ಭವಹಿಂಗಿ ಹೋಯಿತು ವಿಚಿತ್ರ 2 ಭ್ರಮರ ಗುಂಫ ಎಂಬುದು ಗಯಾ ನೇಮದಿಂದ ಕಂಡವಗ ವಿಜಯ ಪ್ರೇಮಭಾವೆಂಬುದು ಸರ್ವಕ್ರಿಯ ವರ್ಮದೋರಿತು ಗುರು ಪುಣ್ಯೋದಯ 3 ಪೃಥ್ವಿ ಪರ್ಯವಣಿದೆವೆ ನೋಡಿ ತತ್ವದೊಳೇಕತ್ವ ಸಮಗೂಡಿ ಹಿತತ್ವವೆಂಬ ದಯ ಮಾಡಿ ಕಥತ್ವವೆಂಬು ದೀಡಾಡಿ 4 ಕಣ್ಣ ದೋರಿ ಬಂತೆನಗ ತಾರ್ಕಣ್ಯ ಕಣ್ಣು ಕಂಡುಗೆಯಿತು ಧನ್ಯಧನ್ಯ ಚಿಣ್ಣ ಮಹಿಪತಿಗಿದೆ ಸರ್ವಪುಣ್ಯ ಇನ್ನೊಂದು ಪಥವ್ಯಾಕೆ ಅನ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತುಪಾಕಿ ಸಾಧನವನು ತ್ವರಿಯ ಬಿದ್ದು ಮಾಡುತಿರುವೆಶಾಬಾಸು ಶಿವನೇ ನೀನಣ್ಣ ಪೇಳುವೆನಣ್ಣ ಪ ಮೌನವೆಂದೆನಿಪ ಮುಸೈದೆ ಸಹಿತಾಗಿಜ್ಞಾನ ಪಡೆದಳವ ಬಗಿಯಣ್ಣಾ ಸಾಧಿಸು ಅಣ್ಣಧ್ಯಾನವೆಂದೆನಿಪ ತಲೆಕಟ್ಟನೆ ಕಟ್ಟಿಆನಂದವನೆ ಆಡಣ್ಣ ಸಾಧಿಸು ಅಣ್ಣ 1 ಆರು ಚಕ್ರವೆಂಬ ಆರು ಕಟ್ಟಿನ ತುಪಾಕಿಧೀರತನದಿಂದ ಪಿಡಿಯಣ್ಣಾ ಸಾಧಿಸು ಅಣ್ಣಮೂರಾವಸ್ಥೆಯೆಂಬ ಮೂವೆರಳ ಮದ್ದ ಹೊಯ್ದಪೂರಾಯದವನ ಮಾಡಣ್ಣ ಸಾಧಿಸು ಅಣ್ಣ2 ಇಡಾಪಿಂಗಳವೆಂಬ ಎರಡು ಗುಂಡನೆ ಹಾಕಿರೂಢಿ ಎಂಬ ಗಜವ ಜಡಿಯಣ್ಣ ಸಾಧಿಸು ಅಣ್ಣಕೂಡಿಹ ಸತ್ವನೆಂಬ ಕೂರಿ ರಂಜಕವರೆದುಗೂಡು ಗುರು ಜಾವಿಗೆ ಒತ್ತಣ್ಣ ಸಾಧಿಸು ಅಣ್ಣ 3 ಆಸನ ನಳಿಕೆಯೆಂಬ ಆಧಾರವನೆ ಆಂತುವಾಸರ ಹೊಗ್ಗೊಡಬೇಡಣ್ಣ ಸಾಧಿಸು ಅಣ್ಣನಾಸಿಕಾಗ್ರವು ಎಂಬ ನೊಣನ ದಿಟ್ಟಿಸಿ ನೋಡಿಸೂಸದೆ ಏರಿಸಿ ನಿಲ್ಲಣ್ಣ ಸಾಧಿಸು ಅಣ್ಣ4 ಬರಿಯ ಪ್ರಣವವೆ ಎಂಬ ಬೆರಳ ಬೊಬ್ಬೆಯನಿಟ್ಟುಭರದಿ ಭೀತಿಯನಳಿಯಣ್ಣಾ ಸಾಧಿಸು ಅಣ್ಣಗುರು ಚಿದಾನಂದನು ಎಂಬ ಗುರಿ ಭ್ರೂಮಧ್ಯವೆ ಇರೆಗುರಿಯ ತಾಗುವಂತೆ ಇಡಣ್ಣ ಸಾಧಿಸು ಅಣ್ಣ5
--------------
ಚಿದಾನಂದ ಅವಧೂತರು