ಮಾರಿ ಬೇರೆಂದೇಕೆ ಹಲುಬುವರು ಜಗದಿ
ನಾರಿಯೇ ಮಕ್ಕಮಾರ್ಯೆಂದೆನ್ನಬಾರದೆ ಪ
ಹಿತದೋರಿ ಮನಸೆಳೆದು ಮತಿಗೆಡಿಸಿ ವಿಧವಿಧ ದು
ಷ್ಕøತ ಪೇಳಿ ಬಂಧುಗಳ ಹಿತವನೆ ಮರೆಸಿ
ಸತತ ಬೆನ್ನ್ಹತ್ತಿ ಬಿಡದೆ ಕ್ಷಿತಿಮೇಲೆ ಅತಿಯಾಗಿ
ವ್ಯಥೆಬಡಿಪ ಮಾರಿ ನಿಜಸ್ಥಿತಿ ವಿಚಾರಿಸದೆ 1
ಮನೆ ಧನ ಗುಣ ಸುಲಿದು ಘನತೆಯನು ಕೆಡಿಸಿ ಮ
ತ್ತನುಕೂಲವನು ಇತ್ತು ತನುಶಕ್ತಿ ಹೀರಿ
ಕುಣಿಕುಣಿಸಿ ಜಗದೊಳಗೆ ಬಿನಗುರಲಿ ಬಿನುಗೆನಿಸಿ
ಘನ ಬಾಧಿಸುವ ಮಾರಿದಿನಿಸು ಕಾಣದಲೆ 2
ಸ್ವಾಮಿ ಶ್ರೀರಾಮನ ಪ್ರೇಮಕ್ಕೆ ದೂರೆನಿಸಿ
ಭುವಿಯೊಳು ಮುಕ್ತಿಕಾಮಿನಿಯ ತೊರೆಸಿ
ನೇಮವಿಲ್ಲದ ಕಷ್ಟ ನೇಮಿಯೊಳಳಿಸಲಿಕೆ
ಯಮನೊಶಕೆ ಕೊಡುವಂಥ ಈ ಮಾರಿನೊದೆಯದೆ 3