ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಾನಕಿಯು ನಮ್ಮಮ್ಮ ನಮಗೆ ಭಯವೇನು ಪ ಪವಮಾನ ತನಯನು ಪಾಲಿಪ ಗುರುವಯ್ಯಾ ಅ.ಪ ಕಾಲಕಾಲದಿ ತಪ್ಪದೆ | ಭತ್ಯವ ಹಾಕಿ ಬಾಲಲೀಲೆಗಳಾಡಿಸಿ ಮೇಲೆ ತುಡುಗಾಟವಾಡಿದರೆ ಕೆನ್ನೆಯ ಹಿಂಡಿ ಹಾಲ ಕುಡಿಸಿ ಮಕ್ಕಳರ್ಥಿಯ ನೋಡುವ 1 ಇತರ ಮಕ್ಕಳಿಗೆಲ್ಲಾ | ಅವರ ಮಾತಾ ಪಿತರು ವಡವೆಗಳಿಟ್ಟು ಮಿತಿಯಿಲ್ಲದೆ ಬೈದು ಬಲು ಚಿಂತೆಯ ಪಡುವರು 2 ಕಳ್ಳರಿಗೆ ಸಿಕ್ಕದೈಯ್ಯ | ನಮ್ಮೊಡವೆಗಳ್ ಕಳಚುವುದಕೆ ಬಾರದು ಒಳ್ಳೆ ವಸ್ತ್ರವ ಉಡಿಸಿ ಉಚಿತ ತಿಂಡಿಯ ಕೊಡಿಸಿ ಸುಳ್ಳಾಡದಂದದಿ ಸುತ್ತಿಸಿ ನಗುವರು 3 ಓದು ಬರಹವ ಕಲಿಸಿ | ನಮ್ಮನು ಕೆಲವು ಹೊತ್ತು ಆಟಗಳಾಡಿಸಿ ಆದರಿಸುತ ಜನ್ಮ ಜನ್ಮಗಳಲಿ ಬಿಡದೆ ಕಾದು ಕೊಂಡಿರುವರು ಕಡೆಗೂ ನಮ್ಮಗಲರು 4 ಇಂತಹ ನಮ್ಮವರ ಬಿಟ್ಟು | ಬರಿದೇ ಲೋಕ ಸಂತೆಯವರನು ನಂಬುವರೆ ಎಂತಾದರೂ ಗುರುರಾಮ ವಿಠಲನ ನಾಮ ಸ್ವಂತವಾದರೆ ಮುಕ್ತಿ ಸ್ವಾಧೀನವಾಗುವುದು5
--------------
ಗುರುರಾಮವಿಠಲ
ಮಾವಿನಕೆರೆ 3 ನಮ್ಮೂರ ದ್ಯಾವರೇ ಬೊಮ್ಮನಪ್ಪನು ಎಂದು ಹೊಯ್ಸಿರೋ ಡಂಗುರವನು ಪ ನಿಮ್ಮ ನೆಂಟರಿಗೆಲ್ಲ ನಿಮ್ಮ ಮಕ್ಕಳಿಗೆಲ್ಲಾ ರಂಗಪ್ಪನವನೆಂದು ಸಾರಿಸಾರಿ ಅ.ಪ ಭೋರಪ್ಪನೆಂದರೂ ತಿಮ್ಮಪ್ಪನೆಂದರೂ ಈರಪ್ಪನೆಂದರೂ ಒಬ್ಬನಣ್ಣ ಸಾರಿ ಡಂಗುರವನು ಹೊಯ್ಸಿರಣ್ಣ 1 ಕುರಿಕೋಳಿ ಕೋಣಗಳ ಶಿರವ ತರಿಯಲು ಬೇಡಿ ನರರಂತೆ ಜೀವಿಗಳು ಅವುಗಳಣ್ಣ ಬರಿಯ ಭಕ್ತಿಯೇ ಸಾಕು ಗುರುಡವಾಹನನವನು ಪರಮಾತ್ಮನವನೆಮ್ಮ ಕಾಯ್ವನಣ್ಣ 2 ರಂಗ ನರಶಿಂಗನು ಗಂಗೆಯನು ಹೆತ್ತನೂ ಗಂಗೆಯನು ಹೊತ್ತವನೂ ಒಬ್ಬನಣ್ಣ ಶಿಂಗರದ ಗೋಪಾಲ ಮಾಂಗಿರಿಯ ರಂಗನೂ ಒಬ್ಬನೇ ತಾನೆಂದು ತಿಳಿಯಿರಣ್ಣ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್