ಒಟ್ಟು 4 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಪ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು 1 ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು 2 ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು 3
--------------
ಕನಕದಾಸ
ಏನು ಇದ್ದರೇನು ನಿನ್ನ ಸಂಗದ ಸಂಗಡ ಬಾರದೇನು ದಾನ ಧರ್ಮವ ಮಾಡಿದ್ದೊಂದು ಬೆನ್ನಬಿಡದದೇನು ಪ ಆಳು ಕಾಳು ಮಂದಿ ಮನುಷರು ಬಹಳವಿದ್ದರೇನು ಮಾಳಿಗೆ ಕೈಸಾಲೆ ಚಂದ್ರಶಾಲೆಯಿದ್ದರೇನು ನೀಲ ಮುತ್ತು ಕೆಂಪಿನುಂಗುರ ಕೈಯಲಿದ್ದರೇನು ಕಾಲನವರು ಎಳೆಯುತಿರಲು ನಾಲಗೆಗೆ ಬಾರದೇನು 1 ನೆಟ್ಟ ಹತ್ತಿಲು ತೋಟ ತೆಂಗು ಎಷ್ಟುತಾನಿದ್ದರೇನು ಮಹಿಷಿ ಸಾವಿರವಿದ್ದರೇನು ಪಟ್ಟೆ ಶಾಲು ಚಿನ್ನದ ಕುಳದ ಘಟ್ಟಿಯಿದ್ದರೇನು ಕಟ್ಟಿಯಿಟ್ಟ ಗಂಟುನಿನ್ನ ಸಂಗಡ ಬಾರದೇನು 2 ಲಕ್ಷವಿತ್ತ ಜಯಿಸಿ ರಾಜ್ಯ ಪಟ್ಟವಾದರೇನು ಕಟ್ಟಿದಾನೆ ಮಂದಿ ಕುದುರೆ ಹತ್ತಿರಿದ್ದರೇನು ನೆಟ್ಟನೆ ಜೀವಾತ್ಮ ಗೂಡ ಬಿಟ್ಟು ಪೋಗದೇನು ಕುಟ್ಟಿ ಕೊಂಡಳುವುದರೆ ಮಂದಿ ಎಷ್ಟು ಇದ್ದರೇನು 3 ಮಕ್ಕಳು ಮೊಮ್ಮಕ್ಕಳು ಹೆಮ್ಮಕ್ಕಳಿದ್ದರೇನು ಚಿಕ್ಕ ಪ್ರಾಯದ ಸತಿಯು ಸೊಸೆದಿಕ್ಕಳಿದ್ದರೇನು ಲೆಕ್ಕವಿಲ್ಲದ ದ್ರವ್ಯ ನಿನಗೆ ಸಿಕ್ಕುಯಿದ್ದರೇನು ಡೊಕ್ಕೆ ಬೀಳೆ ಹೆಣವ ಬೆಂಕಿಗಿಕ್ಕಿ ಬರುವರೋ 4 ಹೀಗೆ ಎಂದು ನೀನು ನಿನ್ನ ತಿಳಿದು ಕೊಳ್ಳಬೇಕೋ ಆಗೋದ್ಹೋಗೋದೆಲ್ಲ ಈಶ್ವರಾಜÉ್ಞ ಎನ್ನ ಬೇಕೋ ವೈರಿ ಕೋಣೆ ಲಕ್ಷ್ಮೀರಮಣನ ಭಜಿಸಬೇಕೋ ಯೋಗ ಮಾರ್ಗದಿಂದ ನೀನು ಮುಕ್ತಿ ಪಡೆಯ ಬೇಕೋ 5
--------------
ಕವಿ ಪರಮದೇವದಾಸರು
ಒಂದು ಕೊಟ್ಟರೆ ಶಿವ ಮತ್ತೊಂದು ಕೊಡನಯ್ಯ ಆನಂದ ವಸ್ತುವಿಗೊಂದು ಲೀಲೆ ಇದಯ್ಯ ಪ ರೊಕ್ಕವಿದ್ದವರಿಗೆ ಮಕ್ಕಳೆಂಬವರಿಲ್ಲ ಮಕ್ಕಳಿದ್ದರೆ ತಕ್ಕವನಿತೆಯಿಲ್ಲ ಚೊಕ್ಕಸತಿಯು ಸಿಕ್ಕಿತಾನುರೂಪದೊಳಿರೆ ಪಕ್ಕನೆ ಅಗಲಿ ಪೋಗುವರಯ್ಯ 1 ಚೆಲುವ ಹೆಣ್ಣೆಗೆ ತಕ್ಕ ಚೆಲುವ ಪುರುಷನಿಲ್ಲ ಚೆಲುವ ನಾದವ ಗೊಳ್ಳೆಲಲನೆಯಿಲ್ಲ ಹಲವು ಜನ್ಮದ ಪುಣ್ಯ ಫಲದಿಂದ ಸೇರಲು ಹೊಳೆದು ಹೋಗುವರಿದರೊಳಗೊಬ್ಬರಯ್ಯ 2 ಸತಿ ಸುತರು ಇರುತಿರಲು ದಾರಿದ್ರ ತಿಂಬುವುದಕಿಲ್ಲ ಗತಿಯಿಲ್ಲದವನಿಗೆ ನರಕವಿಲ್ಲ ಅತಿಶಯವಾಗಿ ತಿಂಬುದಕ್ಕಿದ್ದ ನರರಿಗೆ ಸತತ ಶಾರೀರ ಸುಖವಿಲ್ಲವಯ್ಯ 3 ಉಂಬಲೂಡಲು ಸರ್ವಸಕಲ ಸಂಪತ್ತೆಲ್ಲ ತುಂಬಿರಲು ತನ್ನ ಗೃಹದೊಳೆಲ್ಲ ಬೆಂಬಿಡದೆ ರೋಗವು ಪುಟ್ಟಿತನುವಿನೊಳ್ ತಿಂಬುದಕವಗೆ ಬಾಯಿಗಳಿಲ್ಲವಯ್ಯ 4 ಸಕಲ ಜೀವರಿಗು ಚಿಂತೆಗಳಿಲ್ಲದವರಿಲ್ಲ ಸುಖವು ಸ್ವಪ್ನದೊಳು ಕಾಣುವುದಿಲ್ಲವಯ್ಯ ಬಕನ ವೈರಿಯ ಕೋಣೆಯ ಲಕ್ಷ್ಮೀಪತಿ ಪ್ರಿಯ ಮಕರ ಕೇತನ ವೈರಿಯಾಟವಿದಯ್ಯ 5
--------------
ಕವಿ ಪರಮದೇವದಾಸರು
ಮಗನಿಂದೆ ಗತಿಯುಂಟೆ ಜಗದೊಳಗೆನಿಗಮಾರ್ಥ ತತ್ತ್ವವಿಚಾರದಿಂದಲ್ಲದೆ ? ಪ ತ್ರಿಗುಣರಹಿತ ಪರಮಾತ್ಮನ ಧ್ಯಾನದಿಹಗಲಿರುಳು ನಿತ್ಯಾನಂದದಿಂದತೆಗೆದು ಪ್ರಪಂಚವಾಸನೆಯ ಬಿಟ್ಟವರಿಗೆಮಗನಿದ್ದರೇನು ಇಲ್ಲದಿದ್ದರೇನು ?1 ಶೋಣಿತ ಶುಕ್ಲದಿಮಿಳಿತವಾದ ಪಿಂಡ ತನ್ನ ಪೂರ್ವಕರ್ಮದಿಂದನೆಲಕೆ ಬೀಳಲು ಅದು ಸಲಹಿ ರಕ್ಷಿಪುದೆ ? 2 ಪರಮ ದುಷ್ಟನಾಗಿ ಮರೆತು ಸ್ವಧರ್ಮವಗುರು ಹಿರಿಯರ ಸಾಧುಗಳ ನಿಂದಿಸಿಬೆರೆದನ್ಯ ಜಾತಿಯ ಪರನಾರಿಯ ಕೂಡಿಸುರೆ ಕುಡಿದು ಜೂಜಾಡಿ ನರಕಕ್ಕೆ ಬೀಳುವ 3 ಸತ್ಯನೊಬ್ಬ ಮಗ ಶಾಂತನೊಬ್ಬ ಮಗ ದು-ರ್ವೃತ್ತಿ ನಿಗ್ರಹನೊಬ್ಬ ಸಮಚಿತ್ತನೊಬ್ಬನುಉತ್ತಮರೀ ನಾಲ್ಕು ಮಕ್ಕಳಿದ್ದ ಮೇಲೆಹೆತ್ತರೇನು ಇನ್ನು ಹೆರದಿದ್ದರೇನಯ್ಯ ? 4 ಸುತರಿಲ್ಲದವಗೆ ಸದ್ಗತಿ ಇಲ್ಲವೆಂತೆಂಬಕೃತಕ ಶಾಸ್ತ್ರವು ಲೌಕಿಕಭಾವಕೆಕ್ಷಿತಿಯೊಳು ಕಾಗಿನೆಲೆಯಾದಿಕೇಶವ ಜಗ-ತ್ಪತಿಯ ಭಜಿಪಗೆ ಸದ್ಗತಿಯಿರದೆ ಹೋಹುದೆ ? 5
--------------
ಕನಕದಾಸ