ಒಟ್ಟು 4 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಗನೆ | ನಮ್ಮ ರಂಗನೆ | ಮುನಿದನ್ಯಾತಕೆ ಪ್ರಾಣಲಿಂಗನೆ ಪ ನಿಜವಾದ ವಾಜಿಯ ಮಾಜುತ ಪೇಳಲು |ಸೋಜಿಗ ಮಾಡಲು ಮಂಗನೇನೆ ? 1 ಕೊಳಲನೂದಲು ಬಳಲದೆ ಮನವಿಟ್ಟು |ಕೇಳಲು ಮರುಳ ಕುರಂಗನೇನೆ ? 2 ಬಿಡದೆ ರಮಣಿಯನ್ನು ಎಡದಲ್ಲಿ ಬಿಡುವನು |ಮಡದಿ ಮಾರ್ಗದೊಳು ಹಂಗವೇನೆ ? 3 ಕೈಯಲ್ಲಿ ನೆರೆಯದೆ ಮೈಯಲ್ಲಿ ತೋರದೆ |ಸುಯ್ಯಲು ಬಿಡಲು ಭುಜಂಗನೇನೆ ? 4 ತಕ್ಕಾದ ನುಡಿಯನು ರುಕ್ಮೇಶನಾಡದೆ |ಅಕ್ಕ ಮಿಕ್ಕದ ವಿಹಂಗನೇನೆ ? 5
--------------
ರುಕ್ಮಾಂಗದರು
ನಿನ್ನ ಮಗನೇನೆ ಗೋಪಿಚೆನ್ನಾರಿ ಚೆಲುವ ಉಡುಪಿಯ ಕೃಷ್ಣರಾಯಾ ಪ ತೊಡರು ಅಂದಿಗೆ ಘಲು ಘಲುರೆನೆಅಂಗಳದಲಾಡುತ ಈ ಮುದ್ದುಬಾಲ1 ಕೌಪೀನ ಕೊರಳಲ್ಲಿ ಪದಕಸಟೆಯಿಲ್ಲ ಬ್ರಹ್ಮಾಂಡ ಉದರದಲಿಂಬಿಟ್ಟುಮಿಟಮಿಟನೆ ನೋಡುವ ನೀ ಮುದ್ದುಬಾಲ2 ಹರಿವ ಹಾವನು ಕಂಡು ಹೆಡೆ ಹಿಡಿದಾಡುವಕರುವಾಗಿ ಆಕಳ ಮೊಲೆಯುಂಬುವಹಿರಿದಾಗಿ ನೋಡಲು ಅಂತರಂಗದ ಸ್ವಾಮಿಧರೆಯೊಳಂಬುಧಿ ತೀರ ಉಡುಪಿನ ಕೃಷ್ಣ3
--------------
ವ್ಯಾಸರಾಯರು
ನಿನ್ನ ಮಗನೇನೇ ಗೋಪಿ-ಗೋಪಮ್ಮ |ನಿನ್ನ ಮಗನೇನೆ ಗೋಪಿ? ಪಚೆನ್ನಾರ ಚೆಲುವ ಉಡುಪಿಯ ಕೃಷ್ಣ ಬಾಲ |ನಿನ್ನ ಮಗನೇನೆ ಗೋಪಿ? ಅ.ಪಕಟವಾಯ ಬೆಣ್ಣೆ ಕಾಡಿಗೆಗಣ್ಣುಕಟಿಸೂತ್ರ|ಪಟವಾಳಿಕೈಪಕೊರಳೊಳು ಪದಕ ||ಸಟೆಯಲ್ಲ ಬ್ರಹ್ಮಾಂಢ ಹೃದಯದೊಳಿರುತಿರಲು |ಮಿಟಿಮಿಟಿ ನೋಡುವ ಈ ಮುದ್ದು ಕೃಷ್ಣ 1ಮುಂಗುರುಳ ಮುಂಜೆಡೆ ಬಂಗಾರದರಳೆಲೆ |ರಂಗಮಾಣಿಕದ ಉಂಗುರವಿಟ್ಟು ||ಪೊಂಗೆಜ್ಜೆ ಕಾಲಲಂದುಗೆ ಘಿಲ್ಲುಘಿಲ್ಲೆನುತ |ಅಂಗಳದೊಳಗಾಡುತಿಹ ಮುದ್ದು ಕೃಷ್ಣ 2ಹರಿವ ಹಾವನೆ ಕಂಡು ಹೆಡೆಹಿಡಿದು ಆಡುವ |ಕರುವಾಗಿ ಆಕಳ ಮೊಲೆಯುಣ್ಣುವ ||ಅರಿಯದಾಟವ ಬಲ್ಲ ಅಂತರಂಗದ ಸ್ವಾಮಿ |ಧರೆಯೊಳಧಿಕನಾದ ಪುರಂದರವಿಠಲಯ್ಯ 3
--------------
ಪುರಂದರದಾಸರು