ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ
ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಪ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ಅ.ಪ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ ತಿಳಿವುದೆ ವೈಕುಂಠಕೆ ಓಟ 1 ಹಾರಿ ಹೋಗುವ ಹೊಟ್ಟು ಇದ್ದಾಗ ದಾನ ಧರ್ಮಂಗಳ ಮಾಡೋಡು ಕೈವಲ್ಯಕೆ ಮೆಟ್ಟು ಹೊದ್ದಿರುವರ ಕಂಡಾಸೆಯಪಟ್ಟರೆ ಹೋಗುವಿ ನೀ ಕೆಟ್ಟು ಬುದ್ಧಿಹೀನರಿಗೆ ಪೇಳದಿರೆಲೊ ತತ್ವಸಾರ ಸುಂದರ ಗುಟ್ಟು 2 ಅಲ್ಪಾವಕಾಶವು ಈ ಶರೀರವು ಗಾಳಿಗೊಡ್ಡಿದ ದೀಪ ನೋಡು ಹಾಲುಸಕ್ಕರೆ ತುಪ್ಪ ಬಲ್ಪಂಥ ಮಾಡದಿರು ಜನ್ಮಜನ್ಮದಲಿ ಬಿಡದೆಲೊ ಸಂತಾಪ ಸ್ವಲ್ಪಕಾಲಾದರೂ ಮಧ್ವಮತವೊಂದು ಭವವೇ ನಿರ್ಲೇಪ3 ಕರ್ಮ ಆವುದಾದರು ಸೂಳೆಗಿಕ್ಕ್ಕಿದ ವಿತ್ತ ಹರಿಗೆ ವಿಶ್ವಾಸದಿ ಅಣುಮಾತ್ರ ಅರ್ಪಿಸೆ ಅವನೆ ನಿರ್ಮಲ ಚಿತ್ತ ನಿರುತಗ್ರಾಸಕೆ ಚಿಂತೆಮಾಡಲು ಒದಗದು ಪುಣ್ಯವು ನಿನಗೆತ್ತ ಅರೆಮನವಿಲ್ಲದೆ ದೃಢಮನದಿಪ್ಪುದೆ ಸಂಪಾದನೆ ಭತ್ಯ4 ಭಾವವಿರಕ್ತಿಯ ವಹಿಸದಿದ್ದರೆ ನಿನಗಾಗುವುದು ಖೇದ ಪರಿಪರಿಯಾಸ್ವಾದ ದೇವಕಿಸುತ ನಮ್ಮ ವಿಜಯವಿಠ್ಠಲನಂಘ್ರಿ ತೀರುಥ ಪ್ರಾಸಾದ ನಿತ್ಯ ನರಕವಾಸ ಎನ್ನತಲಿದೆ ವೇದ 5
--------------
ವಿಜಯದಾಸ