ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿಗಳು (ಶ್ರೀ ಬ್ರಹ್ಮಣ್ಯತೀರ್ಥರು) ಕೈಪಿಡಿದು ಪಾಲಿಸೈ ಬ್ರಹ್ಮಣ್ಯಗುರುವೇ ಪ ಅಯ್ಯನೀನೆಂದು ನಿನ್ನಡಿಗೆ ವಂದಿಸುವೇ ಅ.ಪ ಮೂಢವiತಿಗಳು ಬಂದು ಬೇಡಿ ಕೊಳ್ಳಲು ಕರುಣ ನೀಡಿ ನಿನ್ನವರನ್ನು ಕಾಯ್ದರೀತಿ ಗಾಢದಿಂದಲಿ ಬಂದು ಮೂಢನಾದೆನ್ನನು ಗೂಢದಿಂದಲಿ ಕಾಯೊ ಗುಣನಿಧಿಯೆ ಗುರುವೇ . . 1 ಪುರುಷೋತ್ತಮಾರ್ಯರ ವರಪುತ್ರನೆಂದೆನಿಸಿ ಹರುಷದಿಂದಲಿ ಬಂದ ಭಕ್ತಜನರ ಮೊರೆಯಲಾಲಿಸಿ ಸ್ವಾಮಿ ಸ್ಮರಣೆಯ ಕೊಟ್ಟೆನ್ನ ಹರುಷಪಡಿಸುವ ಗುರುವು ನೀನೆಂದು ನಾ ಬಂದೆ 2 ವರಕಣ್ವನದಿ ಕೂಲದಲಿ ಕಲ್ಮಷ ತೊಳೆದು ಸಾರ್ವಭೌಮನ ಗುಣವ ಸರ್ವದಾ ಪಾಡುತಲಿ ಸರ್ವಜನರನು ಕಾವೆ ಸರ್ವಕಾಲದಲಿ 3 ಸರ್ವಗುಣ ಪೂರ್ಣ ಬ್ರಹ್ಮಣ್ಯಪುರ ವಾಸ ನರಹರಿಯ ಪಾದವನು ಸ್ಮರಿಸಿನಿತ್ಯ ಸರಸದಲಿ ಅಬ್ಬೂರು ಪುರವಾಸಿಗಳನೆಲ್ಲ ಅರ್ಭಕರ ತೆರನಂತೆ ರಕ್ಷಿಸುವ ಗುರುವರ್ಯ 4 ಮಣಿದು ಬೇಡುವೆ ನಿನ್ನ ಚರಣದಾಶ್ರಯವಿತ್ತು ಅಣುಗನೆಂದೆನಿಸೆನ್ನ ಸಲಹಬೇಕೊ ಗುಣನಿಧಿ ಶ್ರೀ ಪ್ರಾಣನಾಥ ವಿಠ್ಠಲನ ಘನ ಚರಣ ಸ್ಮರಣೆಯ ನೀಯೊ ಗುರುವೆ 5
--------------
ಬಾಗೇಪಲ್ಲಿ ಶೇಷದಾಸರು
ಭಯ ನಿವಾರಣವು ಶ್ರೀ ಹರಿಯ ನಾಮ |ಜಯಪಾಂಡುರಂಗವಿಠಲ ನಿನ್ನ ನಾಮ ಪಧಾರಿಣೀದೇವಿಗಾಧಾರವಾಗಿಹ ನಾಮ |ನಾರದರು ನಲಿನಲಿದು ನೆನೆವ ನಾಮ |ಘೋರಪಾತಕಿ ಅಜಾಮಿಳನ ಸಲಹಿದ ನಾಮ |ತಾರಕವು ಬ್ರಹ್ಮ - ಭವರಿಗೆ ನಿನ್ನ ನಾಮ 1ಮೊರೆಯಲಾಲಿಸಿ ಮುನ್ನ ಗಜವ ಸಲಹಿದ ನಾಮ |ಕರುಣದಿಂ ದ್ರೌಪದಿಯ ಕಾಯ್ದ ನಾಮ |ಮರುಗುತಿಹ ಧ್ರುವನ ಉನ್ನತನ ಮಾಡಿದ ನಾಮ |ಪರತತ್ತ್ವ ಇಹಕಲ್ಲವೇ ನಿನ್ನ ನಾಮ 2ಚರಣದಲಹಲ್ಯೆಯನು ಸೆರೆಯ ಬಿಡಿಸಿದ ನಾಮ |ಕರುಣದಲಿ ಪ್ರಹ್ಲಾದನನು ಕಾಯ್ದ ನಾಮ |ತೊರೆಯಲಕ್ರೂರನಿಗೆ ನಿಜವ ತೋರಿದ ನಾಮ |ಸ್ಮರಿಸ ಜನರಿಗೆ ಸಮಸ್ತವನಿತ್ತ ನಾಮ 3ಚಂದ್ರಶೇಖರ ಗಿರಿಜೆಗೊರೆದ ಸಿರಿಹರಿನಾಮ ||ಬಂದಾ ವಿಭೀಷಣನ ಪಾಲಿಸಿದ ನಾಮ |ಕಂದಮುಚುಕುಂದನಿಗೆ ಕಾಮಿತವನಿತ್ತ ನಾಮ |(ಸಂದ ಪಾಂಡಪಕ್ಷ ಪಾವನವು ನಾಮ ) 4ಅಖಿಳವೇದಪುರಾಣ ಅರಸಿಕಾಣದ ನಾಮ |ಸಕಲಯೋಗಿ - ಜನಕೆ ಸೌಖ್ಯ ನಾಮ ||ಪ್ರಕಟಿಸಲು ಜಗವ ಪಾವನವ ಮಾಡಿದ ನಾಮ |ರುಕುಮಿಣೀಯರಸ ವಿಠಲ ನಿನ್ನ ನಾಮ 5ಭಕ್ತಿಯಲಿ ನೆನೆವರನು ಎತ್ತಿ ಸಲಹುವ ನಾಮ |ಮುಕ್ತಿ ಮಾರ್ಗಕೆ ಯೋಗ್ಯಹರಿ ನಿನ್ನ ನಾಮ |ಎತ್ತರಕೆ ಏರಿಪುದು ಸ್ವಾಮಿ ನಿನ್ನಯ ನಾಮ |ಚಿತ್ತಜನ ಪೆತ್ತ ಶ್ರೀ ಹರಿಯ ನಾಮ 6ವಾರಿಜಾನನೆ ತುಳಸಿಗೊಲಿದ ಹರಿನಾಮ ಕಾ - |ವೇರಿ ಮಧ್ಯದಲಿ ನೆಲಸಿದ ನಿನ್ನ ನಾಮ ||ಕ್ಷೀರಸಾಗರದಲ್ಲಿ ಶಯನವಾಗಿಹ ನಾಮ |ನಾರಾಯಣಾ ಕೃಷ್ಣಹರಿ ನಿನ್ನ ನಾಮ7ಹೊಂದಿದ್ದ ಭಕ್ತವೃಂದವ ಸಲಹಿದಾ ನಾಮ |ತಂದು ಅಮೃತವ ಸುರರಿಗೆರೆದ ನಾಮ ||ಅಂದಂಬರೀಷನನು ಕಾಯ್ದ ಶ್ರೀ ಹರಿನಾಮ |ತಂದೆ ಪುರಂದರವಿಠಲಹರಿ ನಿನ್ನ ನಾಮ8
--------------
ಪುರಂದರದಾಸರು