ವಾಯುದೇವರು
ನಿನ್ನ ನಂಬಿ ಬಂದೆ ಪಂಚಮುಖಿ ಪ್ರಾಣ
ಅನ್ಯ ಹಂಬಲ ಬಿಡಿಸಿ ಬಿಂಬ ಮೂರುತಿ ತೋರೋ ಪ
ಹಿಂದೆ ತ್ರೇತಾಯುಗದಿ ರಾಮನಾಜ್ಞೆಯ ಹೊಂದಿ
ಸಿಂಧು ದಾಟಿ ಸೀತೆಗೆರಗಿ ನಿಂದು
ಸುಂದರ ರಾಮ ಮುದ್ರಿಕೆಯಿತ್ತು ಲೀಲೆಯಲಿ
ಕೊಂದ ರಕ್ಕಸ ಪುರವನನಲಗೆ ಇತ್ತೆ 1
ಬಂಡಿ ಅನ್ನವನುಂಡು ಭಂಡ ಬಕನಾ ಕೊಂದು
ಹಿಂಡು ನೃಪರಾ ಜರಿದು ಕೊಂಡು ದ್ರೌಪದಿಯಾ
ಮಂದಮತಿಗಳನಳಿದು ತಂದಿ ಸೌಂಗಂಧಿಕವ
ಪುಂಡ ಕೀಚಕರಳಿದ ಪಾಂಡವಪ್ರಿಯದೂತ 2
ಮೋದತೀರ್ಥರೆನಿಸಿ ವಾದಿಗಳ ನಿಗ್ರಹಿಸಿ
ಬೋಧಿಸಿ ಸುಜನರಿಗೆ ಮಾಧವನ ಗುಣವ
ಸಾಧು ವಂದಿತ ಬಾದರಾಯಣರು ಇರುತಿರುವ
ಬದರಿಯಲ್ಲಿರುವಿ ಶ್ರೀ ನರಹರಿಯ ತೋರೋ 3