ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಪೆಯ ತೋರಬಾರದೇನೋ | ಗೋಪಾಲರಾಯ ಪ ತಾಪತ್ರಯ ಬಲು ದೀಪನವಾಗಿದೆನೀ ಪರಿಹರಿಸದೆ ಮತ್ತೋರ್ವರನರಿಯೆ ಅ.ಪ. ಸೂನು ಶ್ರೀನಿವಾಸಾ |ಸಾರುತ ತವಪದ ಸೇವಿಸಿ ಭಕುತಿಲಿ |ದೂರೋಡಿಸಿದನು ಜವನವರಾ 1 ಗಿರಿಜಾತೆಯ ಪ್ರಿಯ ಕುವರಾ | ನೃಪವರದಶರಥ ಸುತ ಭರತಗೆ ಅವರಾ |ಮಾರುತಿ ಮತವನು ಅರುಹುತ ನೀ ಸಂಸಾರಕೆ | ತಾರಕ ನೆನಿಸಿದ ಧೀರಾ 2 ಭೋಗಿ ಶೀಲಾ | ನೀನಘದೂರ ಕಳೆಯೊ ಮೋಹಜಾಲಾ |ಭೋಗಿಶಯನ ಗುರು ಗೋವಿಂದ ವಿಠಲನಬಾಗಿ ಭಜಿಸುವಂಥ ಭಾಗ್ಯವ ನೀಯೋ 3
--------------
ಗುರುಗೋವಿಂದವಿಠಲರು
ಬಾರೆ ಸಖಿ ಪೋಗಿ ರಾಸ ಕ್ರೀಡೆಯಾಡುವ ಪ ಸಾರಸಾಕ್ಷ ಕೃಷ್ಣನು ತಾ ಕೊಳಲನೂದುವ ಅ.ಪ ಜಾರನೆಂದು ಸಣ್ಣಮಾತನಾಡಿದ್ದಾಯಿತು ಚೋರನೆಂದು ಬಹಳ ದೂರು ಮಾಡಿದ್ದಾಯಿತು ಮೂರು ನಿಮಿಷ ಅವನ ಮರೆಯಲಾಗದಾಯಿತು ಬೀರುತಿರುವ ಮೋಹಜಾಲ ಸಡಲದಾಯಿತು 1 ಯಾವನೀತನೆಂದು ಚಿಂತೆ ಮಾಡಿದ್ದಾಯಿತು ಗೋವಳನಿವನಲ್ಲವೆಂದು ನಿರ್ಧರಾಯಿತು ಯಾವನಾದರೇನು ಇವನ ಕ್ಷಣವು ಕಾಣದೆ ಜೀವನ ಕಳೆಯುವುದೆ ದೊಡ್ಡ ಭಾರವಾಯಿತು 2 ಮಂದಹಾಸದಿಂದ ಸಕಲ ಜಗವ ಬೆಳಗುವ ಚಂದ್ರನು ತಾನಿವನ ನೋಡಿ ಬಹಳ ನಾಚುವ ಸಾಂದ್ರವಾಯಿತಂತರಿಕ್ಷ ಮಧುರ ನಾದದಿ ಮಲಯ ಮಾರುತ ತಾ ತಲೆಯನಾಡುವ 3 ನಾದದ ಸುಧೆ ಸಾಗರದಲಿ ತೇಲುವಂತಿದೆ ಮಾಧವ ತಾ ಸುಧೆಯ ರಸವನೆರಚುವಂತಿದೆ ಬಾಧಿಸುತಿಹ ಭವದ ತಾಪವಡಗಿದಂತಿದೆ ಮಾದರಿಫಲ ರಾಸಕ್ರೀಡೆ ತೋರುವಂತಿದೆ 4 ಸಕಲ ಲೋಕನಾಥನೀತನೆಂದು ತಿಳಿಯಿತು ಸಕಲವನರ್ಪಿಸುವುದೊಂದೆ ಮಾರ್ಗ ಉಳಿಯಿತು ಲಕುಮಿ ಮುರುಳಿ ರೂಪದಲ್ಲಿ ಇಹುದು ಹೊಳೆಯಿತು ಭಕುತಿ ಹರಿದು ಎನ್ನ ವiನ ಪ್ರಸನ್ನವಾಯಿತು 5
--------------
ವಿದ್ಯಾಪ್ರಸನ್ನತೀರ್ಥರು
ಹಿಗ್ಗಿದಳು ನಂದನ ಸತಿ ಮುಗ್ಧೆ ತನ್ನಯ ಸುತನ ಮುದ್ದು ಮುಖವ ನೋಡಿ ಅ.ಪ ಪಾಲು ಬೆಣ್ಣೆ ಕಳ್ಳ ತಾಳು ಕಟ್ಟುವೆ ನಿನ್ನ ಕಾಲುಗಳನೆಂದು ಕರಗಳಲಿ ಪಿಡಿದು ನೀಲಮೇಘಶ್ಯಾಮ ಶ್ರೀಲಕುಮಿಯರಸನನು ಬಾಲನೆಂದರಿತು ಆಲಿಂಗನದಿ ಮೈ ಮರೆತು1 ಅಂಬುಜೋದ್ಭವನಯ್ಯ ಅಂಬೆಗಾಲಿಡುವುದನು ನಂಬಬಹುದೇ ಮೋಹಜಾಲವಿರಲು ಸಂಭ್ರಮದಿ ಸುತನನ್ನು ಚುಂಬಿಸುತ ರಭಸದಲಿ ಮೋದ ಕಂಬನಿಯ ಸುರಿಸುತ್ತ 2 ಓರೆಗಣ್ಣಿನ ನೋಟ ನಾರಿಯರ ಪೇಚಾಟ ಮೂರು ಲೋಕಕೆ ಹರ್ಷಕರ ಮಂದಹಾಸ ಸೇರಿಸಿದ ಮುಕ್ತಗಳ ಮೀರಿ ಪೊಳೆಯುವ ದಂತ ಚಾರುಮುಖಿ ಸುತನ ಮನಸಾರ ದರುಶನದಿಂದ 3 ಭೃಂಗಗಳ ಧಿಕ್ಕರಿಪ ಮಂಗುರುಳು ಮಸ್ತಕದಿ ರಂಗಿನಾ ಕಸ್ತೂರಿತಿಲಕ ಪಣೆಯಲ್ಲಿ ಸಿಂಧು ಶ್ರೀರಂಗನ್ನ ನೋಡುತಲಿ ಅಂಗನಾಮಣಿ ಅಂತರಂಗ ಪ್ರೇಮದ ಭರದಿ 4 ತನ್ನ ಉದರದಿ ನಳಿÀನಜಾಂಡವನೆ ಪೊತ್ತಿರುವ ಉನ್ನತೋನ್ನತ ಸುಗುಣ ಜ್ಞಾನಮಯನ ತನ್ನ ಮಗನೆಂದರಿತು ಸ್ತನ್ಯಪಾನದಿ ಸುಪ್ರ ಸನ್ನಮುಖಿ ಹರುಷ ಪುಳಕಿತಳಾಗಿ ಹೆಮ್ಮೆಯಲಿ 5
--------------
ವಿದ್ಯಾಪ್ರಸನ್ನತೀರ್ಥರು