ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊನ್ನು ಹೆಣ್ಣು ಮಣ್ಣು ಮೂರನು ಬಿಟ್ಟು ಚರಿಸುವವ ಯೋಗಿ ಬಣ್ಣ ಸಣ್ಣ ಸರ್ವಾಭರಣವಿಟ್ಟು ಮೆರೆವನು ಬೋಗಿ ಪ ನಾರಿಯರದನು ಕಂಡು ಥೂ ಎಂದುಗುಳಿ ತೊಲಗುವಯೋಗಿ ಭೋಗಿ ಘೋರ ತಪವ ಚರಿಸಿ ಅಡವಿಸೇರಿ ಕೊಂಬನು ಯೋಗಿ ಭೋಗಿ 1 ಮಾಯೆಯಳಿದು ವಸ್ತುವರಿತು ಚರಿಸುತಿಹನು ಯೋಗಿ ಜಾಯೆ ಸುತರ ಸಿರಿಯ ನೆಚ್ಚಿ ಹಿಗ್ಗುತಿಹನು ಭೋಗಿ ಬಾಯ ಬಿಡದೆ ಮೌನಿಯಾಗಿ ಜಪಿಸುತಿಹನು ಯೋಗಿ ಭೋಗಿ 2 ಕುಲದಲಾವನೆಂದು ಜನಕೆ ತಿಳಿಯ ಬಾರದವನು ಯೋಗಿ ಹೊಳಲಿನೊಳಗೆ ಸುಳಿದು ಸುಳಿದು ನಲಿಯುತಿಹನು ಭೋಗಿ ಚಲನ ಭವನ ಕೋಣೆ ಲಕ್ಷ್ಮೀರಮಣನು ತಾನೆಯಾಗಿ ಒಳಗು ಹೊರಗು ಬೆಳಗುತಿಹನು ಯೋಗಾನಂದನಾಗಿ 3
--------------
ಕವಿ ಪರಮದೇವದಾಸರು