ಬರಹೇಳಮ್ಮಾ ಭಾವೇ ಮನೆಗೆ ಬಿರದಂಕ ಹರಿಯಾ|
ಚರಣವನ್ನು ಗಾಣದೆನ್ನ ಚಿತ್ರನೆಲೆ ಗೊಳ್ಳದಮ್ಮಾ ಪ
ಬಾಲೆಕೇಳೆ ಕುಂತಳೆ ಬೇಸರ ವಿದೇನೇ|
ಪಾಲಗಡಲ ಮನೆಯಾ ಬಿಟ್ಟು ಪವನಾಹಾರನ ಪರ್ಯಂಕವನು|
ಜಾಳಿಸಿ ತಾನ್ಯಾಕ ಪೋದನೇ ಜಲರುಹ ನಾಭ|
ಕಾಲಿಲಲ್ಲದವನಾಗಿ ಕೊಂದು ತಮನನೀಗಿ|
ಮ್ಯಾಲಗಿರಿಯ ಪೊತ್ತ ಮರರಿಗ ಮೃತವಿತ್ತಾ|
ಭೂಲಲನೆ ಬಡಿಸಿ ಭೂವರಾಹೆನಿಸಿ|
ಬಾಲಕರಿಯಲು ರೂಪ ಬೆಡಗಾ ವಿಡಿಸು 1
ಉಡುರಾಜದವನೆ ಕೆಳದೀ ಉನ್ನತಿಯ ನೋಡೇ|
ಷಡ್ಗುಣೈಶ್ವರ್ಯವುಳ್ಳಾ ಸುರಮುನಿಸೇವಿತ ಪಾದಾ|
ಬೇಡಿ ಭಾಗ್ಯವ ನೀಡುವ ಬಲುದೊರೆ ತಾನಾಗಿ|
ಬಡಹಾರುವನಂತೆ ಭೂಮಿ ಬೇಡಿದನಂತೆ|
ಕೊಡಲಿಪಿಡಿದರೆ ಸಕುಲ ಮಾಡಿದ ನಾಶಾ
ವಡನೆ ವಾನರ ಸಂಗ ವಿರಹರಿಸಿ ಸುರತುಂಗಾ|
ತುಡುಗತನದಿ ಬೆಣ್ಣೆತಿನ್ನುವರೆ ರನ್ನೆ 2
ಕರಿರಾಜ ಗಾಮಿನೀ ಕಿರೀಟ ಕುಂಡಲದಾ ಶಿವತ್ವಕುಂಡಲದಿಂದಾ|
ಪರಮಪುರಷದೇವನು ಪೀತಾಂಬರಧಾರೀ|
ಬರಿಯ ಬತ್ತೆಲೆಯಾಡಿ ಬೌದ್ಯರೋಳಗ ಕೂಡೀ|
ತುರಗೀರಿಯ ವನರ ತುಳಿಸುತ ಸುರವರ
ಮೊರೆಗೇಳಿ ಬಂದನು ಮನದೊಳು ನಿಂದನು|
ಗುರು ಮಹಿಪತಿ ಪ್ರೀಯಾ ಗುಣಗಣನಿಲಯಾ3