ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಕಮಲ ತಡೆಯುವುದೆ ಕಟುಖಾರವಾ ನಿತ್ಯ ಪೂಜಿಸುವ ಕೋಮಲದಾ ಪ. ಪರಿವಾರ ಜನವು ಭೋಜನಕೆ ಕುಳಿತಿರಲು ನರ ಹರಿಗೆ ಅರ್ಪಿತದ ಹುಳಿಯಲ್ಲಿ ಕರವಿಟ್ಟು ಪರಿಪಕ್ವ ಶಾಖದ ಹೋಳುಗಳ ಬಡಿಸಲು ಕರ ಕರೆಗೆ ಸಿಲುಕೇ 1 ಮಧ್ವದುಗ್ಧಾಭ್ಧಿಯಲಿ ಜನಿಸಿದ ಸುಧಾರಸವ ಶುದ್ಧ ದೃಷ್ಟಿಯಲ್ಲೀ ಸವಿಸವಿದು ಮಧುರಾ ಹೃದ್ವಜದಲಿ ತುಂಬಲನುವಾದ ಪುಸ್ತಕವ ಮುದ್ದಾಗಿ ಪಿಡಿಯಲನುಕೂಲವಾಗಿ ಇಂಥ 2 ಗಂಧ ಕುಸುಮಾಕ್ಷತೆಗಳಿಂದ ಶ್ರೀ ತುಳಸಿದಳ ದಿಂದ ವಿಠ್ಠಲ ಕೃಷ್ಣ ಲಕ್ಷ್ಮಿನರಹರಿಯಾ ವೃಂದ ಸಾಲಿಗ್ರಾಮ ಹನುಮ ಯತಿಕುಲಜರುಗ ಳಿಂದ ಸಹಿತದಿ ಪೂಜೆ ವಿಭವದಲಿ ಗೈದಾ 3 ಮಧುರಾನ್ನ ಸವಿದು ಮಧುಸೂದನನ ಗುಣಗಳನು ವಿಧವಿಧದಿ ಮಧ್ವಗ್ರಂಥದಿ ಕಂಡು ನಲಿದೂ ಹೃದಯ ನಿರ್ಮಲದಿ ಆಲಿಸುವ ಭಕ್ತರಿಗೆ ಮಧುರ ರಸಮನದ ಎಡೆಯಲ್ಲಿ ಬಿಡಿಸುವ ಇಂಥ 4 ಗೋಪಾಲಕೃಷ್ಣವಿಠ್ಠಲನ ಭಕ್ತರು ಬಂದು ಶ್ರೀಪಾದಕೆರಗೆ ಸಿರದಲ್ಲಿ ಅಕ್ಷತೆಯಾ ಅಪಾರ ಕರುಣದಿಂದಲಿ ಸೂಸಿ ನಲಿಯುತಲಿ ಅಪತ್ತು ಕಳೆವ ಶ್ರೀ ಪ್ರದ್ನುಮ್ನತೀರ್ಥಯತಿ 5
--------------
ಅಂಬಾಬಾಯಿ