ಗುರುವಶಕೆ ನಮೋ ಎಂಬೆ ನಮ್ಮ
ಶ್ರೀ ಮದಾನಂದತೀರ್ಥ ಪದ್ಮನಾಭರಿಗೆ |
ರಾಮದೇವರ ಕಂದ ನರಹರಿಗೆ ||
ಕಾಮಿತ ಫಲವೀವ ಮಾಧವಕ್ಷೋಭ್ಯರಿಗೆ |
ಆ ಮಹಾಮಹಿಮ ಜಯತೀರ್ಥ ರಾಯರಿಗೆ 1
ವಿದ್ಯಾಧಿರಾಜರಿಗೆ ವಿಜಯ ಕವೀಂದ್ರ ಸು |
ಸದ್ಗುಣ ವಾಗೀಶ ರಾಮಚಂದ್ರರಿಗೆ ||
ವಿದ್ಯಾನಿಧಿ ರಘುನಾಥ ರಘುವರ್ಯತೀರ್ಥರಿಗೆ |
ಅದ್ವೈತಮತ ಖಂಡ ರಘೋತ್ತರಾಯರಿಗೆ 2
ವೇದವ್ಯಾಸ ವಿದ್ಯಾಧೀಶ ವೇದನಿಧಿ ಮುನಿಗೆ |
ನಿತ್ಯ ವತ್ರರಿಗೆ ||
ಮೇದಿನಿಯಲಿ ಮೆರೆದ ಸತ್ಯನಿಧಿತೀರ್ಥರಿಗೆ |
ವಾದಿಗಜಕೆ ಸಿಂಹ ಸತ್ಯನಾಥರಿಗೆ 3
ಯತಿಶ್ರೇಷ್ಠ ಸತ್ಯಾಭಿನವತೀರ್ಥರಿಗೆ |
ಸತತ ಸಜ್ಜನಪಾಲ ಸತ್ಯಪೂರ್ಣರಿಗೆ ||
ಅತಿಶಯವಾನಂದ ಸತ್ಯ ವಿಜರಿಗೆ |
ಮತ ಉದ್ಧಾರಕ ಶ್ರೀ ಸತ್ಯಪ್ರಿಯರಿಗೆ4
ಇಂತು ಗುರುಗಳ ಸಂತರೆ ಕೊಂಡಾಡಿ
ಇಂತು ಸುತಾಪವನುರುಹಿ ಬಿಟ್ಟು ||
ಸಂತೋಷಿ ನಾನಾದೆ ವಿಜಯವಿಠ್ಠಲನ್ನ
ಚಿಂತಿಯ ಮಾಡುವೆ ದಾಸರ ದಯದಿಂದ 5