ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದೇ ಮತ ಹರಿಯ ಮತ ಒಂದೇ ಭಾವ ಸಿರಿಯರಸನ ಭಾವ ಸಲಹಿದ ನರಹರಿ ಒಂದೇ ಮನದಂಬರೀಷನ ಕಾಯ್ದ ಹರಿ ಒಂದೇ ಮನದಿ ಧ್ರುವನ ಕಾಯ್ದ ಹರಿ ಒಂದೇ ಗಳಿಗೆಯಲಿ ತನ್ನುಂಗುಟದಿ ಸೋಕಿಸೆ ಕಲ್ಲಾಗಿದ್ದಹಲ್ಲೆಯ ಪೆಣ್ ಮಾಡಿದ ತಂದೆಯಂದದಿ ಭಕ್ತರ ಹಿಂದೆ ಕಾದಿದ್ದು ಕರುಣಾಸಿಂಧು ಭಕ್ತರ ಬಂಧು ಸುಂದರಿ ಸಿಂಧುಸುತೆಯರಸನ ನಿತ್ಯ ನೆನಯಿರಿ ಹರಿ ಭಕ್ತರು 1 ಸಾರ ನಾಲ್ಕು ಯುಗದಾಧಾರ ನಾಲ್ಕು ಮುಖದಲಿ ನೆಲಸಿ ಸೃಷ್ಟಿಕಾರ್ಯವ ನಡೆಸಿ ನಾಲ್ಕು ಮುಖ ಬೊಮ್ಮನಲಿ ನಾನಿಲ್ಲವೆನಿಸಿ ನಾಲ್ಕು ಯುಗದಲಿ ಜನಿಸಿದ ರಕ್ಕಸರಿಗೆ ತಿಳಿಸಿ ನಾಲ್ಕು ಲೋಕದಿ ಮೆರೆದ ನಾಕಚಾರ ವಂದ್ಯ ನಾಲ್ಕು ಹಸ್ತದಿ ನಾಲ್ಕು ವೇದತಂದಾ ಮೂರ್ತಿ ನಾಲ್ಕು ವೇದದ ಸಾರದಮೃತ ಭಕ್ತರಿಗಿತ್ತು ಹದಿನಾಲ್ಕು ಲೋಕಕೆ ನಾನೇ ಕರ್ತನೆಂದರಿಸಿ ನಾಲ್ಕು ವಿಧದಲಿ ಕಾವ ಶ್ರೀ ಶ್ರೀನಿವಾಸನ ಭಕ್ತರಾದರೆ ಈ ಕಲಿಯುಗದಿ ನಾಲ್ಕು ಜನರು ಮೆಚ್ಚುವರು ನಿಮ್ಮ ಹರಿ ಭಕ್ತರೆ ಕೇಳಿ2 ನಿನ್ನ ಸಹವಾಸ ಸೈ ನಿನ್ನ ಒಡನಾಟ ಸೈ ನಿನ್ನ ರೂಪ ಚತುರ ಬುದ್ಧಿ ಎನ್ನ ಸೈ ಎನ್ನಲಾಪರೆ ನಿನ್ನ ಕೈ ಚಳಕವಿಲ್ಲದಲೆ ಜೈಸುವದೆಂತೀ ಕಲಿಕಾಲದಿ ಸ್ವಾಮಿ ಜೈಲುವಾಸದಿ ಕೂತು ನಿನ್ನ ಕಲ್ಯಾಣವ ಕಟ್ಟಿದರೊ ನಿನ್ನ ಭಕ್ತರು ಜೈ ಕರುಣಾಕರ ನಿನ್ನ ಭಕ್ತರ ಮಹಿಮೆ ನಾ ಪೊಗಳುವದೆಂತೊ ಜೈ ಎನಿಸಿಕೊಳ್ಳಲು ನಿನ್ನೊಲುಮೆ ಕಾರಣವಲ್ಲವೆ ಜೈವೆಂಕಟ ಶ್ರೀಶಾ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಗೆ ಜಯ ಅಪಜಯವೆಲ್ಲಿ ನಿನ್ನ ಭಕ್ತರಿಗೆ ಎಂದೆಂದಿಗೂ ಜೈ ಹರಿಭಕ್ತರ ನೆನೆಯಿರಿ ಹರಿಭಕ್ತರು 3 ಯನ್ನ ಯತ್ನವೇನಿಲ್ಲಿದರೋಳು ಪನ್ನಗಾದ್ರಿ ನಿವಾಸನಲ್ಲದೇ ಯನ್ನ ಯತ್ನ ಸಲ್ಲುವುದೇ ಎನ್ನ ಮನಸಿಲಿ ಬಂದು ನಿಂದು ತಾನೇ ನುಡಿಸಿದನಿಂದು ಚೆನ್ನಗಿರಿಯರಸ ಭಕ್ತ ಜನ ಬಂಧು ಬಂದು ನಿಂದು ಎನ್ನ ಮನದಭಿಲಾಷೆ ಸಲಿಸೆ ದೀನ ವತ್ಸಲನು ಎನ್ನ ಕರದಲಿ ಬರೆಸಿ ನಲಿದಾಡಿದ ತನ್ನ ವಾಣಿಯನಿತ್ತು ಎನ್ನ ಕುಲದೈವ ಶ್ರೀ ಶ್ರೀನಿವಾಸನ ಕೃಪೆ ಎನ್ನ ಮೇಲೆಂತುಟೊ ಕಾಣೆ ಇನ್ನು ಈ ವಾಣಿ ಹರಿಯದೆಂದು ನುಡಿವುದು ಹರಿಭಗವದ್ಭಕ್ತರು 4 ಪಾಮರರಿಗೆ ಕಲ್ಪತರು ಪಾಮರರಿಗೆ ಜಗದ್ಗುರು ವರವ ತೋರಿ ಪಾಮರರ ಪುನೀತರನು ಮಾಡೆ ಹರಿ ಪಾಮರೆಂದು ಲೆಕ್ಕಿಸದೇ ತಾವಲಿದು ನುಡಿಸಿದ ಪತಿತ ಪಾವನ್ನ ಶ್ರೀ ಶ್ರೀನಿವಾಸನದೇ ಈ ಉಕ್ತಿಯಲ್ಲರ ನೃತ್ರವಿಲ್ಲೆಂದು ತಿಳಿದು ಪಾಮರರನ್ನುದ್ಧರಿಸಲು ಹರಿಭಕ್ತರು ಪಠಿಸುವುದು ಈ ನುಡಿಯ 5 ಜತೆ ಶರಣು ಭಕ್ತರ ಪಾಲ ಶರಣು ಶ್ರೀಲೋಲಾ ಶರಣು ನಿನಗೆ ಸದಾ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ - ಜಗ ಪ ದೇಕ ವಿಖ್ಯಾತ ಪಶ್ಚಿಮ ರಂಗಧಾಮ ಅ ತಮನೊಡನೆ ಹೋರಿ ಬೆಟ್ಟವನು ಬೆನ್ನಲಿ ಪೊತ್ತುರಮಣಿ ಭೂಮಿಯನು ತಂದಾಯಾಸವೂಅಮರವೈರಿಯ ಕರುಳ ಕಿತ್ತ ಕಡು ಧಾವತಿಯೊಕ್ಷಮೆಯನಳೆದೀ ಪಾದಕಮಲ ನೊಂದವೊ 1 ಪೊಡವಿಪಾಲಕರ ವಂಶವನು ವಪನ ಮಾಡಿಕೊಡಲಿಯನು ಬಿಸುಟು ಮಲಗಿದ ಭಾವವೊಮಡದಿಯನು ಕದ್ದೊಯ್ದವನ ಶಿರವನೆ ತರಿದುಒಡಲಿನಾಯಾಸದಲಿ ಪವಡಿಸಿದ ಪರಿಯೋ 2 ವಾಲಿ ಮೊದಲಾದ ಎದುರಾಂತ ವೀರರ ಕೊಂದುಕಾಳಿಯ ಹೆಡೆಯ ತುಳಿತುಳಿದು ಮೈಯಲಸಿತೊಲೀಲೆಗೋಸುಗ ಬಂದು ನಿರ್ವಾಣದಲಿ ನಿಂದುಆ ಲಜ್ಜೆಗಾಗಿ ತಲೆ ಬಾಗಿ ಮಲಗಿದೆಯೊ 3 ನಾಲ್ಕು ಯುಗದಾಧಾರಿ ಕಡೆಗೆ ತುರಗವನೇರಿಸಾಕಾಗಿ ದಣಿದು ನೀನಿಲ್ಲಿ ಮಲಗಿದೆಯೊಸಾಕಾರಿಯಾಗಿ ಗೌತಮ ಮುನೀಶ್ವರನಿಗೆಬೇಕೆಂದು ನೀ ಕೊಟ್ಟ ವರಕೆ ಮಲಗಿದೆಯೊ 4 ಕಾಲ ನೀನಿಲ್ಲಿ ಮಲಗಿದ್ದರೂನಿನ್ನನೆಬ್ಬಿಸುವವರನೊಬ್ಬರನು ಕಾಣೆಉನ್ನಂತ ಕಾಗಿನೆಲೆಯಾದಿಕೇಶವರಾಯಚೆನ್ನ ಶ್ರೀರಂಗಪಟ್ಟಣದ ರಂಗಧಾಮ 5
--------------
ಕನಕದಾಸ