ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ
ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ.
ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1
ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2
ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3