ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣ ನಿನ್ನ ಚರಣ ಸೇವೆಯ ಬಿಟ್ಟು ಸಾರಸಾಕ್ಷನೆ ಪ್ರಾಣದಿರಲಾರೆ ಕ್ಷಣವೂ ಪ ದಾರಿಯೆನಗಿದೊಂದೇ ತೊರ್ಪದು ಸುಖನಿಧಿ ಬಾರಿಬಾರಿಗೂ ಹರಿ ದ್ಯಾನಾನಂದದೊಳಿಗೆ ಅ.ಪ ಅನ್ನವಸ್ತ್ರಂಗಳಿಗಾಗಿ ದುಡಿವದೊಂದು ಚೆನ್ನ ಪುತ್ರರ ರಕ್ಷಣೆಯೊಂದೆಡೆ ತನ್ನ ಮರ್ಯಾದೆ ಕುಂದುಗಳೆಂಬೊ ವ್ಯಸನದಿ ಭಿನ್ನಿಸಿ ತಾಪತ್ರಯ ಪಡುತಿರುವಿಲ್ಲಿ 1 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಪ್ರೇಮ ಬಾಂಧವರಾಗೆನ್ನನಪ್ಪಿಹರೋ ಸ್ವಾಮಿ ನೀಯೆನ್ನನವರ ಧಾಳಿಗಿಡದಂತೆ ಸಾಮಜವರದ ಸಲಹೆಂದು ಸಂತೋಷದಿ 2 ಭಾಗೀರತಿಪಿತ ಭಾಗವತಪ್ರೀತ ಯೋಗಿಜನಂಗಳೊಳತಿ ಹಿತನೇ ಸಾಗರಶಯನನೆ ಭೋಗಿಗಳ ಪುಣ್ಯನೆ ಬಾಗುವ ಶರಣರ ಬಹುಭಾಗ್ಯನೇ 3 ನಾನಿಲ್ಲಿಗೆ ಬಂದ ಕಾರಣ ಕಾಣೆನೋ ದೀನಪಾಲಕ ಕಾರ್ಯಮಾಡಿಸೋಯನ್ನಿಂ ಏನಾದರು ಮಾಡು ತಪ್ಪಹೊರಿಸಬೇಡ ಶ್ರೀನಿಧಿ ಹೆಜ್ಜಾಜಿಕೇಶವ ಪಾಲಿಸು 4
--------------
ಶಾಮಶರ್ಮರು