ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀದೇವಿಯ ಪ್ರಾರ್ಥನೆ ಶ್ರೀನಿವಾಸನ ಕರುಣಾನು ಸಂಸರಣಿ ಜ್ಞಾನ ಭಕ್ತಿಗಳನ್ನು ಪಾಲಿಸಂಭರಣಿ ಪ. ಅಜಭವಾದಿಗಳಿಗೆ ನಿಜಪದದಾಯಿನಿ ವೃಜಿನ ಸಮೂಹ ನಿವಾರಿಣಿ ಕುಜನ ಕುಠಾರಿಣಿ ಕುಂಜರ ಗಮನೆ ಪಾಲು ದಧಿವಾಸನ ಕೂಡಿ ಸದನದಿ ನೆಲೆಗೊಳ್ಳೆ 1 ಆರಿಗೆ ನಿನ್ನ ಕರುಣಾರಸ ದೊರೆವದೊ ನೀರಜಾಲಯೆ ನಿನ್ನ ಸೇರಿಕೊಂಡಿಹ ಎನ್ನ ವೈರಿ ಜನರು ಬೇಗ ಗಾರಾಗದುಳಿವರೆ 2 ನೀನೊಲಿಯಲೂ ಸರ್ವ ಮಾನವರೊಳಗತಿ ಮಾನ ಮಹತ್ವಾದಿ ಸದ್ಗುಣವೂ ತಾನಾಗಿ ಬರುವವಿಂನೇನೆಂದು ನಿನ್ನ ಮಹಿ- ಮಾನು ವರ್ಣನೆ ಮಾಳ್ಪೆ ದೀನ ದಯಾಕಲೆ 3 ಮಂದಿರದೊಳಗೆ ನೀ ನಿಂದು ನಗುತ ನಲಿ ವಂದ ನೋಡುತ ಮಿತ್ರ ಬಂಧುಗಳು ಮಂದರಧರ ತಾನೆ ನಿಂದು ರಕ್ಷಿಸನೆಂದಾ ನಂದ ಪೂರಿತ ಮನದಿಂದ ಸೇರಿರುವರು 4 ಸರಸಿಜನಾಭ ಶ್ರೀಹರಿಯು ನಿನ್ನನ್ನೆ ಮುಂ ದಿರಿಸಿ ಚತುರ್ವಿಧ ಪುರುಷಾರ್ಥವಾ ಕರುಣಿಪೆನೆಂದು ಕಂಠಸರದ ಮಧ್ಯೂರದಲಿ ಧರಿಸಿ ಶೋಭಿಪ ಶೇಷಗಿರಿವರ ಶಿಖರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ