ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವನಜನೇತ್ರೆ ಕನಕಗಾತ್ರೆ ಅನುವಿನಿಂ ಬಾ ಮಿತ್ರೆ ಪ. ವಿನಯದಿಂದ ಜನಕ ಸಾರುವ ಕೋಲನಾಡುವ ಅ.ಪ. ಆರ್ಯಮಾತೆಯ ಆರ್ಯಧರ್ಮದ ಸಾರವರಿಯುವ ವೀರಮಾತೆಯ ಭೂರಿಕೀರ್ತಿಯ ಪಾಡಿಸುಖಿಸುವ 1 ಬೇಗನೇಳಿರೆ ಭಾಗ್ಯೋದಯಮದೀಗ ನೋಡಿರೇ ಬೀಗಿಮಲಗುವ ರೋಗವುಳಿದು ಸರಾಗದೆ ಪಾಡಿರೇ 2 ಅವನೀಮಾತೆಯ ಭವಿತವ್ಯತೆಗೆ ತವಕಗೊಳ್ಳುತ 3 ಶುದ್ಧರಾಗಿ ತಿಲಕತಿದ್ದಿ ವೃದ್ಧರಂ ನಮಿಸಿರಿ4 ಶ್ರದ್ಧೆಯಿಂ ಕಾರ್ಯಸಿದ್ಧಿಗೊಯ್ಯಿರಿ ಸಿದ್ಧಾರ್ಥರೆನಿಸಿರಿ ಸದ್ಧರ್ಮ ದೀಕ್ಷಾಬದ್ಧರಾಗಿ ಸುಭದ್ರವಿಳೆಗೊದವಿರಿ5 ಅರಸರನ್ನು ಸರಸದಿಂದ ಹುರುಡಿಸಿರಿನ್ನು ಪುರುಷರೆನ್ನಿಸಿ ಕಾರ್ಯಮೆಸಗುವ ತೆರನ ತೋರಿಸಿ 6 ದೇಶದೇಳ್ಗೆಯೊಳಾಸೆಯಿರಿಸಿ ಲೇಸನೆಸಗಿರಿ ದೋಷಹರಣ ಶೇಷಗಿರೀಶಗೆ ಮೀಸಲಿರಿಸಿರಿ7
--------------
ನಂಜನಗೂಡು ತಿರುಮಲಾಂಬಾ