ಅರಿತು ಕೊಳ್ಳಿರೊ ಬ್ಯಾಗ ಹರಿಯ ನಾಮಮೃತ
ದೊರಕುವದಲ್ಲಿದು ನೋಡಿ ಸರ್ಕನೆ ಸರ್ವರಿಗೆಲ್ಲಾ ಧ್ರುವ
ಗುರುಕರುಣ ಕೃಪೆಯಿಂದ ಪರಮ ದಿವ್ಯಾಮೃತವು
ಸುರಿಸುರಿದು ಚಪ್ದರಿಸು ಸೂರ್ಯಾಡಿ ಸಾರಸವ 1
ಅನುದಿನ ಸೇವಿಸುವ ಅನುಭವಿಗಳೂಟ
ಏನೆಂದು ಸುರಲಿ ನಾ ಆನಂದೋಬ್ರಹ್ಮವಾ 2
ಮಾನವ ಜನ್ಮ
ಚಂದ ಮಾಡಿಕೊಳ್ಳಿರೊ ಬಂದ ಕೈಯಲಿ ಬ್ಯಾಗ 3
ಆಲಸ್ಯ ಮಾಡಬ್ಯಾಡಿ ವಾಲ್ಗೈಸಿಕೊಳ್ಳಲಿಕ್ಕೆ
ಸುಲಲಿತವಾಗಿಹುದು ತಿಳಿದುಕೊಂಬವರಿಗೆ 4
ಇರಳ್ಹಗಲ ಪೂರ್ಣ ಸುರವುತಿಹ ಅಮೃತ
ತರಳ ಮಹಿಪತಿ ಪ್ರಾಣ ದೊರೆವ ಸಂಜೀವನ 5