ದಿಟ್ಟ ಮುಖ್ಯಪ್ರಾಣನೆ ಜಗಜಟ್ಟಿ ಬಾ ಸುತ್ರಾಣನೆ
ಶ್ರೇಷ್ಠದನುಜಘರಟ್ಟ ಸುಗುಣವಿಶಿಷ್ಟ ಭಕ್ತಶಿಖಾಮಣಿ ಪ.
ವಾಯುಪುತ್ರ ವಿಚಿತ್ರ ಬಲಿಸುರರಾಯರಾಯರ ಗಂಡನೆ
ಪ್ರೀಯರಾಮಪದಾಬ್ಜಮಧುಕರ ಮಾಯಿಕದನಪ್ರಚಂಡನೆ 1
ಶ್ರೀವರೋತ್ತಮ ಹನುಮ ಭೀಮಕೃಪಾವಲಂಬ ಮಹೋಜನೆ
ಪಾವಮಾನಿ ಪರೇಶ ಪದ್ಮಜ ಭಾವಿ ಯತಿಕುಲರಾಜನೆ 2
ಶೂರಾಗ್ರಣಿ ಸುಗುಣಿ ಲಕ್ಷುಮಿನಾರಾಯಣದಾಸನೆ
ಭಾರತೀವದನಾರವಿಂದಕೆ ಸೂರ ನಿತ್ಯವಿಲಾಸನೆ 3