ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿರಂಜೀವಿಯಾಗಿರೆಲೊ ಚಿಣ್ಣ ನೀನು ಪ ಪರಮ ಭಾಗವತರ ಪದಧೂಳಿ ಧರಿಸುತಲಿಅ.ಪ ಜರಿಯಬೇಡ ಹರಿಯ ಮರೆಯಬೇಡೆಂದೆಂದು ತಿರಿಯಬೇಡ ಖಳರ ಮನೆಗೆ ಪೋಗಿ ಬೆರೆಯಬೇಡ ಪರರ ಸತಿಯ ಸ್ವಪ್ನದಲೂ 1 ಲೋಕವಾರ್ತೆಯ ನಿನ್ನ ಕಿವಿಗೆ ಕೇಳಿಸಬೇಡ ಶ್ರೀ ಕಾಂತ ಚರಿತೆಯನು ಕೇಳದಿರಬೇಡ ಪಾಕವನು ಮಾಡಿ ಏಕಾಂಗಿಯಾಗುಣಬೇಡ ಭೂಕಾಂತರನುಸರಿಸಿ ಬೆಸಗೊಳ್ಳಬೇಡ 2 ಸಾಲ ಮಾಡಲಿ ಬೇಡ ಸಾಲದೆಂದೆನಬೇಡ ನಾಳೆಗೆ ಹ್ಯಾಗೆಂಬ ಚಿಂತೆ ಬೇಡ ಖೂಳ ಜನರೊಡಗೂಡಿ ಕಂಗೆಡಲಿ ಬೇಡ ನೀ ಬಾಳುವರ ಸಂಗದಲಿ ಬಾಳೆಲವೊ ಬಾಲ 3 ಕಂಡವರಿಗೆಲ್ಲ ಕೌತುಕ ತೋರಲಿ ಹೆಂಡಿರು ಮಕ್ಕಳು ಅಳಿಯ ಸೊಸೆ ಮೊಮ್ಮಕ್ಕಳು ಉಂಡುಟ್ಟು ದ್ವಿಜರ ಸಹ ಗಂಡುಗಲಿಯಾಗೋ 4 ಮಂದಮತಿಗಳ ಕೂಡೆ ಮಾತಾಡಲಿ ಬೇಡ ನಿಂದಕರ ಕಣ್ಣೆತ್ತಿ ನೋಡಬೇಡ ಇಂದಿರೆಯರಸ ಶ್ರೀ ವಿಜಯವಿಠ್ಠಲನ ಚರಣ ದ್ವಂದ್ವದಲಿ ಮಸ್ತಕವ ನೀಡದಿರಬೇಡ5
--------------
ವಿಜಯದಾಸ
ಯಾಕೆ ಸುಮ್ಮನೆ ಹೊತ್ತ ಕಳೆವಿರಿ ಲೋಕವಾರ್ತೆಯಲಿ ಶ್ರೀಕರನ ಸರ್ವತ್ರ ಸ್ಮರಿಸುತ ನಾಕ ಭೂಗತ ಸೌಖ್ಯ ಬಯಸದೆ ಏಕಚಿತ್ತದಿ ನಂಬಲನುದಿನ ಸಾಕುವನು ಸಕಲೇಷ್ಟದಾಯಕ ಪ. ಸ್ನಾನ ಜಪ ದೇವಾರ್ಚನ ವ್ಯಾಖ್ಯಾನ ಕರ್ಮಗಳು ದಾನ ಧರ್ಮ ಪರೋಪಕಾರ ನಿಜಾನುಪಾಲನವು ಏನು ಮಾಡುವುದೆಲ್ಲ ಲಕ್ಷ್ಮೀಪ್ರಾಣನಾಯಕ ಮಾಳ್ಪನೆಂದರಿ- ದಾನು ನನ್ನದು ಎಂಬ ಕೀಳಭಿಮಾನ ತಾಳದೆ ಧ್ಯಾನ ಮಾಡಿರಿ 1 ಪೊಟ್ಟಿಯೊಳಗಿಂಬಿಟ್ಟು ಚೀಲದಿ ಕಟ್ಟಿ ಬಿಗಿದಿರುವ ಕಾಲದಿ ಕೊಟ್ಟು ಬುತ್ತಿಯನಿಟ್ಟು ಬಾಯೊಳು ಧಿಟ್ಟ ತಾ ಪೊರೆವ ವಿಠಳ ಕರುಣಾಳು ಕಾಯನೆ ಥಟ್ಟನೊದಗುವ ತನ್ನ ದಾಸರ ಮಾಡುವ ರಾಜನಿರುತಿರೆ 2 ಪಾಪವೆಂಬುದೆ ಪಂಕಜಾಕ್ಷ ರಮಾಪತಿಯ ಮರವು ಪುಣ್ಯ ಕಲಾಪವೆಂಬುದೆ ಪೂರ್ವ ಗಿರಿವರ ಭೂಪತಿಯ ನೆನಪು ಈ ಪರಿಯ ಶ್ರುತ್ಯರ್ಥಸಾರ ಪದೇ ಪದೇ ಮನದಲ್ಲಿ ಗ್ರಹಿಸುತ ತಾಪ ಹೊಂದದೆ ಭೂಪರಂತಿರಿ 3
--------------
ತುಪಾಕಿ ವೆಂಕಟರಮಣಾಚಾರ್ಯ