ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವು ನೆಮ್ಮದಿಯಾಗಲಿ ಪ ಅನುದಿನವು ನಿನ್ನ ಮನಸಾರೆ ಪೂಜಿಸುವಂತೆ ಅ.ಪ ಬೆಟ್ಟ ಬಿಸಿಲಿನಲಿ ಬೇಯುವುದ ನೋಡುತ ಮನವು ಕೆಟ್ಟು ಹೋಗದೆ ಸತತ ಶುದ್ಧವಿರಲಿ ಹೊಟ್ಟೆ ಪಾಡಿಗೆ ಕೊರತೆ ಪಡುತಿರುವ ಜನರಲ್ಲಿ ಸಿಟ್ಟುಬಾರದೆ ಮನಕೆ ತಾಳ್ಮೆಯಿರಲಿ 1 ನೀರು ಕಡೆದರೆ ಬೆಣ್ಣೆ ಬಾರದೆನ್ನುವ ಕ್ಲೇಶ ದೂರವಾಗಲಿ ತಿರುಗಿ ಬಾರದಿರಲಿ ವೀರ ಹನುಮನು ತನ್ನ ಸಾರಸೇವೆಗೆ ಫಲವ ಕೋರಿದನೆ ಧನಕನಕ ವೈಭವಗಳ 2 ಗೋಪುರವ ತಾಂಗಿರುವೆನೆಂಬ ಗೊಂಬೆಯ ಹೆಮ್ಮೆ ಈ ಪರಿಯೆ ಮನದ ಕ್ಲೇಶವ ತಂದಿತು ಶ್ರೀ ಪತಿಯು ಮಾಡಿ ಮಾಡಿಸುವೆನೆಂಬುವಜ್ಞಾನ ಲೋಪಪೊಂದದೆ ಮನ ಪ್ರಸನ್ನವಾಗಲಿ ದೇವ 3
--------------
ವಿದ್ಯಾಪ್ರಸನ್ನತೀರ್ಥರು