ಯಾಯಾ ವಾರವ ನೀಡಿ ಪ್ರೀಯದಿಂದಲಿ ಜನರು
ಸ್ತ್ರೀಯರು ಮುದದಿಂದ ಪ
ಸಾರುತ ಹರಿದಾಸ ಕೇರಿಯೊಳಗೆ ಬರಲು
ಚೋರತನವ ಮಾಡಿ ಚುದಗು ಬುದ್ಧಿಯಲಿಂದ
ದ್ವಾರವನಿಡದಿರಿ 1
ಬಂದಾ ಹರಿದಾಸನ ವಂದಿಸಿ ನಿಮ್ಮಯ
ಮಂದಿರದೊಳು ಕರೆದು ತಂದಿಗಳೆಂದು ನಲು
ವಿಂದಲಿ ಉಪಚರಿಸಿ 2
ಪರಲೋಕ ಬಂಧುಗಳೆ ಕರುಣವ ಮಾಡಿದಿರಿ
ಕರ್ಮ ಪರಿಹರವೆಂದು ನಾ
ಸಿರ ಬಗೆ ಕೊಂಡಾಡುತಾ 3
ಪತಿಮತೈಕ್ಯವಾಗಿ ಅತಿಶಯ ಭಕುತಿಯಲಿ
ಗತಿಗೆ ಸಾಧನವೆಂದು ತಿಳಿದು ಈ ಧರ್ಮಕ್ಕೆ
ಪ್ರತಿಕೂಲವಾಗದಲೆ 4
ವಕ್ಕಡತಿ ತಂಡುಲವ ಚಕ್ಕನೆ ನೀಡಲು
ಮಕ್ಕಳು ಮರಿಗಳು ಸಹಿತ ನಿತ್ಯಾ
ಸುಖವಕ್ಕು ಸಟಿಯಲ್ಲಾ 5
ಇಲ್ಲವೆಂದು ನುಡಿದರೆ ಪುಲ್ಲಲೋಚನವಪ್ಪಾ
ಎಲ್ಲ ಕಾಲದಲಿ ನಿಮ್ಮಂಗಣದೊಳು
ಇಲ್ಲವೆ ನಿಂತಿಪ್ಪದು 6
ಹಸ್ತು ಹರಿದಾಸ ಬಂದು ಹೊಸ್ತಿಲಿಂದಲೆ ತಿರಿಗಿ
ವಿಸ್ತರಿಸುವೆ ಕೇಳು ಹರಿ ತೊಲಗುವಾ ದ್ವಿ
ಮಸ್ತಕ ಭುಂಜಿಸುವಾ 7
ಒಂದೊಂದು ಕಾಳಿಗೆ ಒಂದೊಂದು ಕುಲಗೋತ್ರ
ಮುಂದೆ ಉತ್ತಮ ದೇಹದಲಿ
ಬಂದು ಸುಜ್ಞಾನದಿಂದಲೆ ಲೋಲಾಡುವರು 8
ಹಲವು ಪೇಳುವದೇನು ಸುಲಭಾವೆನ್ನು ಧರ್ಮ
ಅಳಿದು ಹೋಗುವದಲ್ಲ್ಲ ಇದನು ವಿಜಯವಿಠ್ಠಲ
ಬಲ್ಲ ಮಹಾಫಲವ9