ದಾಸದಾಸ್ಯವ ದಯಮಾಡಿ ಸಲಹೋ ಕರುಣಾ ಸಮುದ್ರ ಹರಿಯೆ
ಸುಳಿ ಘಾಸಿಮಾಡದ ಮುನ್ನ ಪ.
ಅಂತಪಾರಗಳಿಲ್ಲವಿದಕಿನ್ನು ಪ್ರತಿ ಕ್ಷಣ
ಚಿಂತನೆಯಿಂದಲಿ ಬಾಧೆಗೊಳಿಸುವುದು
ಕಂತುಜನಕ ನೀನಿತ್ತದನುಂಡು ಸುಖಿಸದೆ
ಭ್ರಾಂತಿ ಬಡಿಸುವದನೆಂತು ವರ್ಣಿಸಲಿನ್ನು 1
ತನ್ನಿಂದಧಿಕ ಕಷ್ಟ ಪಡುವ ಜನರ ಕಂಡು
ಭಂಡಾಗಿರದಿ ಪರರ ಹೊನ್ನು
ಹೆಣ್ಣುಗಳಲಿ ಕಣ್ಣಿಟ್ಟು ಹಗಲಿರು-
ಳುಂಣಲೀಯದು ನಿದ್ರೆ ಕಣ್ಣಿಗೆ ಬಾರದಿನ್ನು 2
ಭವರೋಗ ವೈದ್ಯ ನೀನೆಂದು ಸಕಲ ಶ್ರುತಿ
ನಿವಹವು ನಿನ್ನ ಕೊಂಡಾಡುವುದು
ನವವಿಧ ಭಕುತಿ ಮಧ್ವ ತವಕದೊಳೆನಗಿತ್ತು
ಭುವನ ಪಾವನ ಶೇಷಗಿರೀಶಾ ನೀ ದಯದೋರು 3