ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಂದಕರು ಎಂದವರ ತುಚ್ಚಿಸಲಾಗದುಸಂದೇಹವಿಲ್ಲವು ಅವರು ಅತಿಹಿತರು ಪ ಸಂಚಿಸಿದ ಕರ್ಮದಿಂ ಸತ್ಪುರುಷರುದಿಸಿರಲುಹಂಚಿಕೊಂಬರು ತಾವು ಎಲ್ಲರದನುವಂಚಕರು ಎಂದವರ ನೀಚಸಲಿಕಾಗದು ಮುಂಚೆವಂದಿಸಬೇಕು ಅವರ ಪದಕೆ 1 ತಾಯಿ ಶಿಶುವಿನ ಮಲವ ತಾ ತೃಣದಿ ತೆಗೆಯುವಳುಮಾಯಹರ ಮಹಾಪುರುಷರ ಮಲವನುಆಯಾಸವಿಲ್ಲದಲೆ ತಮ್ಮ ನಾಲಿಗೆಯಲಿ ತೆಗೆಯುವರುಪ್ರಿಯರಿಂತವರಿಗಿಂತ ಹಿತವರುಂಟೆ 2 ಉದಯ ಮಧ್ಯಾಹ್ನ ಮುಹೂರ್ತಗಳ ನೋಡದಲೆವಿಧವಿಧದ ಪಾಪಗಳ ತಮ್ಮ ಮುಖದಿಮುದದಲುಚ್ಚರಿಸಿ ಚಿದಾನಂದ ಗುರುಭಕ್ತರನುಸುಧೆಯ ಸುಖಮುಕ್ತಿಯೊಳು ಹೊಂದಿಸುವವರು 3
--------------
ಚಿದಾನಂದ ಅವಧೂತರು
ನಿನ್ನ ಕ್ಲೇಶವ ಕೇಳೆ ಎನಗೆ ಮರುಕಪ ಎನ್ನ ಕ್ಲೇಶವ ನಿನಗೆ ತಿಳಿಸಬಹುದೆ ದೇವ ಅ.ಪ ಹದಿನಾಲ್ಕು ಲೋಕಗಳ ಹುಡುಗತನದಲಿ ಪಡೆದು ಅದಕೆಲ್ಲ ಅನ್ನವೀಯುವ ಚಿಂತೆಯು ಹದಿನಾಲ್ಕು ಲೋಕಗಳ ಸರ್ವಕರ್ಮಗಳಿಗೂ ಹಗಲಿರುಳು ಪ್ರೇರಣೆಯ ಮಾಡುವಾತಂಕ 1 ಹಿರಿಮಗನದೊಂದುಸಿರ ತರಿದರೆಂಬಾತಂಕ ಕಿರಿಮಗನ ದೇಹ ಪೊಸಕಿದ ಚಿಂತೆಯು ಹರನು ಮೊಮ್ಮಗ ಹಾಲಾಹಲವ ಕುಡಿಯುತ ಹಲ್ಲು ಕಿರಿಯುವಾತಂಕಕ್ಕೆ ಹರವು ತೆರವಿಲ್ಲ 2 ಚಂಚಲಳು ಸತಿಯೆಂದು ಹೊಂಚು ಕಾಯುವ ಚಿಂತೆ ಮಂಚದಲಿ ಘಟಸರ್ಪ ವಿಷದ ಚಿಂತೆ ಸಂಚಿತಾಗಮ ಪ್ರಾರಭ್ಧಗಳನಳಿಸುವಗೆ ವಂಚಕರು ಏನು ಮಾಡುವರೆಂಬ ಚಿಂತೆ 3 ಹಲವು ವಿಧ ವೇಷಗಳ ತಾಳಿ ಜಗಂಗಳಲಿ ನೀ ತಲೆಯ ಮರಿಸಿಕೊಂಡರೇನು ಫಲವೊ ಬಳಸಿ ಹುಡುಕಿ ಗೂಢಚಾರಿ ಯೋಗಿಯು ನಿನ್ನ ತಿಳಿದು ಬೆಳಕಿಗೆ ತರುವ ಮರೆಮಾಚಲೇಕೊ 4 ತಾಪತ್ರಯ ತಳೆಯೆ ಗೋಪನಲಿ ಪುಟ್ಟಿದರು ಗೋಪಿಯರ ಸಾಸಿರದ ಗೋಳು ನಿನಗೆ ಭೂಪ ದಶರಥನ ಮಗನಾಗಿ ಪುಟ್ಟಿದರಯ್ಯೊ ಪಾಪ ಸತಿಯಳ ಕಳೆದುಕೊಂಡ ಬಲುಚಿಂತೆ 5 ನಿನ್ನ ಬೇಡುವುದಿಲ್ಲ ನಿನ್ನ ಕಾಡುವುದಿಲ್ಲ ನಿನ್ನ ನೋಡಲು ಎನಗೆ ಬೇಸರವು ಜಗಕೆ ನಿನ್ನ ಚಿಂತೆಯು ಮನ ಪ್ರಸನ್ನತೆ ನೀಡುವುದು ಇನ್ನೇನು ನಿನಗೆ ಚಿಂತೆಯೊ ತಿಳಿಸಿ ಪೊರೆಯೊ 6
--------------
ವಿದ್ಯಾಪ್ರಸನ್ನತೀರ್ಥರು
ಬೆಳುದಿಂಗಳ ಪ್ರಭೆ ಬಲು ಕಾಂತಿಯಿರಲುಬಲವನು ದುರ್ಗುಣಕೆ ಹತ್ತಬಹುದೇಬೆಳಗುತ್ತ ಜ್ಞಾನದ ಚಂದ್ರನು ಹೊಳೆದಿರೆಬಳಿಕ ಜನನ ಮರಣ ಮುತ್ತಬಹುದೆ ಪ ಬಹು ಬೆಳಕು ಬೆಳಗಲು ಮನದ ಮರ್ಕಟವದುಮರವ ನೇರದೆ ಕೆಳಗೆ ನಿಲ ಬಲ್ಲುದೆಬಹು ಕಾಮವೆಂಬ ಕಾಗೆ ಕಣ್ಣುಡುಗಲುಗೂಡಿನಿಂದಾ ಹೊರಗೆ ಬರಬಲ್ಲದೆ1 ಚೆಲ್ಲಿರೆ ಕಾಂತಿಯು ಕಳ್ಳರಾರ್ವರ ತಲೆಚೆಂಡಾಡದೆ ತಾನು ಸುಮ್ಮನಿಹುದೆಫುಲ್ಲ ತಿಂಗಳ ಬೆಳಕು ಎಲ್ಲೆಡಗೆ ಹರಡಿರೆಪಂಚ ವಂಚಕರು ಓಡದಿಹರೆ2 ಒಲಿದರೆ ತೇಜವು ಅವಿದ್ಯದ ಕತ್ತಲೆಯುತಾನೋಡದೆ ಅಲ್ಲಿ ನಿಲಬಲ್ಲುದೆಬಲು ಕಳೆ ಚಿದಾನಂದಗುರು ತಾನು ಬೆಳಗುತಿರೆಬಹಳ ಜನ್ಮದ ಪಾಪ ಹರಿಯದಿಹುದೇ3
--------------
ಚಿದಾನಂದ ಅವಧೂತರು