ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೂದಿಯ ಹಚ್ಚಿರೊ ಶುದ್ಧ ವೈಷ್ಣವರಿದ- ರಾದಿಯ ತಿಳಿಯಲು ಕೇಳಿ ಬಲ್ಲವರು ಪ ಮೂಲಾಗ್ನಿಯಿಂದಲೆ ಸುಟ್ಟಿಹ ಬೂದಿ ಮೂಲ ಮಂತ್ರಂಗಳ ಜಪಿಸುವ ಬೂದಿ ಮೂಲಾಧಾರವ ತೋರುವ ಬೂದಿ ಕಾಲ ಕರ್ಮಂಗಳ ಕಡಿವಂಥ ಬೂದಿ 1 ಏಳು ಸುತ್ತಿನ ಒಳಗೆ ಇರುವಂಥ ಬೂದಿ ಏಳು ವೈರಗಳನ್ನು ಕಳೆವಂಥ ಬೂದಿ ಏಳು ಅಗಳ ದಾಟಿ ಹಾರುವ ಬೂದಿ ಬ- ಹಳ ಜ್ಞಾನಿಗಳೆಲ್ಲ ಧರಿಸುವ ಬೂದಿ 2 ಒಂಭತ್ತು ಕಡೆಯಿಂದ ಒಲಿದಿಟ್ಟ ಬೂದಿ ಕುಂಭಕದೊಳಗದ ಇರಿಸುವ ಬೂದಿ ಸಂಭ್ರಮದಿ ಅರಸನ ಗೆಲುವಂಥ ಬೂದಿ ಅಂಬರಕಾಗಿಯೆ ಲಂಬಿಪ ಬೂದಿ 3 ಪಂಚಾಗ್ನಿಯಿಂದಲೆ ಬೆಂದಿಹ ಬೂದಿ ಪಂಚತತ್ವಂಗಳನು ಗೆಲುವಂಥ ಬೂದಿ ಪಂಚ ಮೃತ್ಯುಗಳನ್ನು ಕಳೆವಂಥ ಬೂದಿ ವಂಚಿಸಿಕೊಳ್ಳದೆ ಧರಿಸುವ ಬೂದಿ 4 ಆರು ವೈರಿಗಳನ್ನು ತೂರುವ ಬೂದಿ ಆರು ಭಾವಗಳನ್ನು ಬೇರಿಟ್ಟ ಬೂದಿ ಆರು ಭ್ರಮೆಗಳನ್ನು ಕಡಿದಿಟ್ಟ ಬೂದಿ ಆರಿಗೂ ತೋರದೆ ಹಾರುವ ಬೂದಿ 5 ಅಷ್ಟಮದಂಗಳ ಕಟ್ಟುವ ಬೂದಿ ದುಷ್ಟಾತ್ಮರನ್ನು ಅಟ್ಟುವ ಬೂದಿ ಕುಟ್ಟೆ ಹಿಡಿವ ಬೀಜಕಿಟ್ಟಿಹ ಬೂದಿ ಭ್ರಷ್ಟಕರ್ಮಗಳನ್ನು ಸುಟ್ಟಂಥ ಬೂದಿ 6 ಸಕಲ ಋಷಿಗಳೆಲ್ಲ ಧರಿಸುವ ಬೂದಿ ತ್ರಿಕರ್ಣ ಶುದ್ಧದಿ ತುಂಬಿದ ಬೂದಿ ಮಕರಕುಂಡಲಧರ ಮರುಳಹ ಬೂದಿ ಸಖನಹ ವರಾಹತಿಮ್ಮಪ್ಪ ಬೂದಿ 7
--------------
ವರಹತಿಮ್ಮಪ್ಪ