ಆತ್ಮನಿವೇದನೆಯ ಹಾಡುಗಳು
ಡಂಭಕದ ಭಕುತಿಯನು ಬಿಡು ಕಂಡ್ಯ ಮನವೆ ಪ
ಅಂಬುಜಾಕ್ಷನು ಒಲಿಯ ಅನಂತ ಕಾಲಕ್ಕು ಅ.ಪ.
ಬಹಿರ ಅಂಗಡಿ ಹೂಡಿ ಜನರ ವಂಚಿಸಿದರೆಅಹಿಕ ಫಲವಲ್ಲದೆ ಮೋಕ್ಷವುಂಟೆ ?ವಿಹಿತಾ ವಿಹಿತವ ತಿಳಿದು ಸತ್ಕರ್ಮ ಕಿಂಚಿತು ಮಾಡೆದಹಿಸುವುದು ಅಘರಾಶಿ ಅಹಿಶಾಯಿ ಒಲಿವ 1
ವರ ವೈಷ್ಣವರು ಬಂದು ನಿಲಲು ವಂದಿಸದಲೆಹರಿ ಪೂಜೆ ಮಾಳ್ಪೆನೆಂದು ಕುಳಿತುಕೊಂಬೆಅರಿಯದ ಊರೊಳಗೆ ಅಗಸರ ಮಾಳಿಯೇಹಿರಿಯ ಮುತ್ತೈದೆಯು ಎಂದು ಕರೆಸುವಂತೆ 2
ಜಪವ ಮಾಡುವೆನೆಂದು ಮುಸುಕನಿಟ್ಟು ಕುಳಿತುತಪಿಸುವೆ ಒಳಗೆ ನೀ ಧನದಾಸೆಯಿಂದೆಕುಪಿತ ಬುದ್ಧಿಯ ಬಿಟ್ಟು ಮೋಹನ್ನ ವಿಠ್ಠಲನಗುಪಿತ ಮಾರ್ಗದಿ ಭಜಿಸಿ ಸುಪಥವನುಸರಿಸೆ 3