ಹರಿಭಕುತರ ದರುಶನವು ಅತಿಹರುಷವು ಧ್ರುವ
ಹರಿ ನೆನೆವರಾ ನೆರಿಯು ನಿಧಾನದಾ ಕೆರೆಯು
ಹರಿ ಸ್ಮರಿಸುವರ ಮರಿಯು ವಜ್ರವರಿಯು
ಹರಿ ಭಜಿಸುವರ ಸರಿಯು ನಿಜಘನಾತ್ಮದ ಝರಿಯು
ಹರಿ ಮಹಿಪರ ಕರಿಯು ಪರಮಾನಂದದ ತೆರಿಯು 1
ಹರಿಶರಣರ ನುಡಿಯು ಕರುಣದಮೃತಧ್ವನಿಯು
ಹರಿಯದಾಸರ ನಡೆಯು ನಿಲಕಡೆಯು
ಹರಿಭಕ್ತರಿದ್ದೆಡೆಯು ಪುಣ್ಯಕ್ಷೇತ್ರದ ತಡಿಯು
ಹರಿಮಹಿಮರ ಕಡಿಯು ಕ್ಯಾದಿಗ್ಹೊಡಿಯು 2
ಹರಿಭಕ್ತರ ಸಂಗ ಸ್ನಾನಗಂಗ ತುಂಗ
ಹರಿಮಹಿಮರ ಅಂಗ ಅಂತರಂಗ
ಹರಿಪರಮಾನಂದ ಗುರು ಕರುಣಾಕೃಪಾಂಗ
ಭಂಗ 3