ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಶಕೆ ನಮೋ ಎಂಬೆ ನಮ್ಮ ಶ್ರೀ ಮದಾನಂದತೀರ್ಥ ಪದ್ಮನಾಭರಿಗೆ | ರಾಮದೇವರ ಕಂದ ನರಹರಿಗೆ || ಕಾಮಿತ ಫಲವೀವ ಮಾಧವಕ್ಷೋಭ್ಯರಿಗೆ | ಆ ಮಹಾಮಹಿಮ ಜಯತೀರ್ಥ ರಾಯರಿಗೆ 1 ವಿದ್ಯಾಧಿರಾಜರಿಗೆ ವಿಜಯ ಕವೀಂದ್ರ ಸು | ಸದ್ಗುಣ ವಾಗೀಶ ರಾಮಚಂದ್ರರಿಗೆ || ವಿದ್ಯಾನಿಧಿ ರಘುನಾಥ ರಘುವರ್ಯತೀರ್ಥರಿಗೆ | ಅದ್ವೈತಮತ ಖಂಡ ರಘೋತ್ತರಾಯರಿಗೆ 2 ವೇದವ್ಯಾಸ ವಿದ್ಯಾಧೀಶ ವೇದನಿಧಿ ಮುನಿಗೆ | ನಿತ್ಯ ವತ್ರರಿಗೆ || ಮೇದಿನಿಯಲಿ ಮೆರೆದ ಸತ್ಯನಿಧಿತೀರ್ಥರಿಗೆ | ವಾದಿಗಜಕೆ ಸಿಂಹ ಸತ್ಯನಾಥರಿಗೆ 3 ಯತಿಶ್ರೇಷ್ಠ ಸತ್ಯಾಭಿನವತೀರ್ಥರಿಗೆ | ಸತತ ಸಜ್ಜನಪಾಲ ಸತ್ಯಪೂರ್ಣರಿಗೆ || ಅತಿಶಯವಾನಂದ ಸತ್ಯ ವಿಜರಿಗೆ | ಮತ ಉದ್ಧಾರಕ ಶ್ರೀ ಸತ್ಯಪ್ರಿಯರಿಗೆ4 ಇಂತು ಗುರುಗಳ ಸಂತರೆ ಕೊಂಡಾಡಿ ಇಂತು ಸುತಾಪವನುರುಹಿ ಬಿಟ್ಟು || ಸಂತೋಷಿ ನಾನಾದೆ ವಿಜಯವಿಠ್ಠಲನ್ನ ಚಿಂತಿಯ ಮಾಡುವೆ ದಾಸರ ದಯದಿಂದ 5
--------------
ವಿಜಯದಾಸ