ಬಾರಯ್ಯ ಗುರುದೇವರಾಯ ಶ್ರೀ
ಹರಿಯೆ ನಮ್ಮಯ್ಯ ಗುರು ಭಕ್ತಜನ ಪ್ರಿಯ ಧ್ರುವ
ನೀರೊಳು ಪೂಕ್ಕು ನಿಗಮನ ತಂದಿ ಬಾರಯ್ಯ
ಧರಿಯ ಬೆನ್ನಿಲಿ ಪೊತ್ತು ನಿಂದಿ ನೀ ಬಾರಯ್ಯ
ಧಾರುಣಿಯ ಗೆದ್ದು ಹಿರಣ್ಯಕನ ಕೊಂದಿ ಬಾರಯ್ಯ
ಎಂದೆನಯ್ಯ ಗುರುತಂದೆಬಾರಯ್ಯ 1
ಮೂರು ಪಾದವನಳಿದುಕೊಂಡಿ ನೀ ಬಾರಯ್ಯ
ಶಿರಗಳನೆ ಚೆಂಡಾಡಿ
ಸಿರಿ ತಂದಿ ಬಾರಯ್ಯ ಗಿರಿಯೆನೆತ್ತಿ ನಿಂದಿ ಬಾರಯ್ಯ ಶ್ರೀ
ಹರಿ ಮುಕುಂದಯ್ಯ ಗೋವಿಂದ ಬಾರಯ್ಯ 2
ಬರಿಯ ಬೆತ್ತಲೆ ಆಗಿ ವ್ರತವಳಿದಿ ಬಾರಯ್ಯ
ಏರಿ ಕುದುರಿಯನೆ ರಾವುತನಾದಿ ಬಾರಯ್ಯ ಪರಮಭಕ್ತರನು
ಹೊರಿಯಲಿ ಬಂದಿ ಬಾರಯ್ಯ ಪರಿಪರಿ ರೂಪವಾದಯ್ಯ
ತರಳ ಮಹಿಪತಿ ಪ್ರಾಣದೊಡೆಯ ಬಾರಯ್ಯ 3