ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನುವಂಶ ಜಲಧಿಜಾತೆ ಸೀತೆ ಪೊರೆಯೆ ಜಾನಕಿ ಘನ ಪುಣ್ಯವಿನಯೆ ದಿವ್ಯರೂಪೆ ಜನನಿ ಭಾಮಿನಿ ಪ ರಾಮಚಂದ್ರ ಭಾಸಮಾನ ಹೃದಯ ಕುವಲಯೆ ಕಾಮದಗ್ಧ ದನುಜನಯನ ಕಾಲರೂಪಿಣಿ 1 ಲಕ್ಷ್ಮಣಾದಿ ಭಕ್ತಪಾಲೆ ನಿತ್ಯರೂಪಿಣಿ ಚಿತ್ತದಲ್ಲಿ ನೆಲಸು ದೇವಿ ತತ್ವಭೂಷಿಣೆ 2 ಆದಿಶಕ್ತಿ ಭೇದರಹಿತೆ ಮೋದದಾಯಕಿ ಮಾಧವಾಂಘ್ರಿ ಯುಗಳ ಸೇವೆಯನ್ನು ಕರುಣಿಸು 3 ಭೂಮಿತನಯೆ ಭೂಮ ಮಹಿಮೆ ಕಾಮಿನೀ ರಮೆ ಸಾಮಜಾಕರೋರು ಯುಗಳೆ ರಾಮ ಸುಂದರಿ4 ಪಂಕಜಾದಿ ಕುಸುಮಲೋಲೆ ಶಂಕರೀಪ್ರಿಯೆ ಅಂಕದಲ್ಲಿ ಪೊರೆಯೆ ಮಾತೆ ಪಂಕಜಾನನೆÀ 5
--------------
ಬೇಟೆರಾಯ ದೀಕ್ಷಿತರು