ಶರ್ವೇಡ್ಯ ಮೋಹನ ವಿಠಲ ಪೊರೆ ಇವನ ಪ
ಸರ್ವತ್ರ ಸರ್ವದಾ | ಸರ್ವ ಮಂಗಳನೇ ಅ.ಪ.
ಸುಕೃತ | ರಾಶಿ ಫಲಿಸಿತೋ ಇವಗೆದಾಸ ದೀಕ್ಷೆಯಲಿ ಮನ | ಲೇಸುಗೈದಿಹನೋ |ವಾಸವಾದೀ ವಂದ್ಯ | ಭಾಸುರಾಂಗನೆ ದೇವದೋಷಾಗಳನಳಿದು ಸಂ | ತೋಷವನೆ ಪಡಿಸೋ1
ಹರಿದಾಸ ರೊಲಿದಿವಗೆ | ದರುಶನವನಿತ್ತಿಹರುಗುರು ರಘೋತ್ತಮರಂತೆ | ಬೃಂದಾವನಸ್ಥಾನರಹರಿಯು ಸ್ವಪ್ನದಲಿ | ಹರಿಹಯಾಸ್ಯವ ತೆರದಿದರುಶನಕೆ ಕಾರಣವು | ಪರಮ ಪ್ರಿಯರ್ದಯವೂ 2
ಅದ್ವೈತ ತ್ರಯಜ್ಞಾನ | ಸಿದ್ಧಿಸುತ ಸಂಸಾರಅಬ್ಧಿಯನೆ ಉತ್ತರಿಸೊ | ಮಧ್ವಾಂತರಾತ್ಮಾ 3
ಕಿಂಕಿಣಿಯ ಶೋಭಿತನೆ | ಶಂಕರೇಡ್ಯನೆ ನಿನ್ನಅಂಕಿತವ ನಿತ್ತಿಹೆನೊ | ಲೆಂಕತನದವಗೇವೆಂಕಟ ಕೃಷ್ಣ ಹೃತ್ | ಪಂಕಜದಿ ತವರೂಪಕಿಂಕರಗೆ ತೋರೆಂದು | ಶಂಕಿಸದೆ ಬೇಡ್ವೇ 4
ಸರ್ವಜ್ಞ ಸರ್ವೇಶ | ದುರ್ವಿಭಾವ್ಯನೆ ಹರಿಯೆದರ್ವಿಜೀವನ ಕಾವ | ಹವಣೆ ನಿನದಲ್ಲೇ |ಪರ್ವ ಪರ್ವದಿ ಇವಗೆ | ನಿರ್ವಿಘ್ನ ನೀಡಯ್ಯಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5