ತುಂಗಭದ್ರ ನದಿ ತೀರದಿ ನೆಲಸಿಹನ್ಯಾರೆ ಪೇಳಮ್ಮಯ್ಯ ಪ.
ರಂಗ ತಾನು ಇಲ್ಲಿರುತಿಹನಮ್ಮ ಅ.ಪ.
ಶಂಖ ಚಕ್ರ ತ್ರಿಶೂಲವ ಧರಿಸಿಹನ್ಯಾರೇ ಪೇಳಮ್ಮಯ್ಯ
ಶಂಕಿಸದಂದದಿ ತೋರುವನಮ್ಮ 1
ಈ ಪರಿರೂಪವ ಧರಿಸಲು ಕಾರಣವೇನೇ ಪೇಳಮ್ಮಯ್ಯ
ಈ ಪರಿರೂಪವ ಧರಿಸಿಹನಮ್ಮ 2
ಪರಿ ಶುದ್ಧ ಸಾತ್ವಿಕರಿಗೆ ಹ್ಯಾಗೇ ಪೇಳಮ್ಮಯ್ಯ
ಶುದ್ಧ ಜ್ಞಾನವನಿತ್ತು ಸಲಹುವನಮ್ಮ 3
ವಿಷ್ಣು ಭಕ್ತರ ಮನಸಿಗೆ ತೋರುವ ಮತಿ ಏನೇ ಪೇಳಮ್ಮಯ್ಯ
ಬಿಟ್ಟಿರಲಾರದ ಗುಟ್ಟು ಕಾಣಮ್ಮ 4
ಪರಿ ಲೀಲೆ ಇದೇನೆ ಪೇಳಮ್ಮಯ್ಯ
ಹರಿಯು ತಾನು ಒಲಿಯನು ಕಾಣಮ್ಮ 5
ಪರಿ ಹ್ಯಾಗೇ ಪೇಳಮ್ಮಯ್ಯ
ಪರಿ ಧರಿಸುವದೊಂದರಿದೇನಮ್ಮ 6
ಹರಿಹರ ಕ್ಷೇತ್ರದಿ ನೆಲಸಿಹ ಸ್ವಾಮಿಯ ಭಜಿಸುವದ್ಹ್ಯಾಗೇ ಪೇಳಮ್ಮಯ್ಯ
ಕರಕರೆ ಭವವನು ಕಳೆಯಬೇಕಮ್ಮ 7
ಶ್ರೀಸತಿ ಪಾರ್ವತಿ ಸಹಿತದಿ ನೆಲಸಿಹನ್ಯಾರೇ ಪೇಳಮ್ಮಯ್ಯ
ಶೇಷಭೂಷಣ ಸಹ ಶ್ರೀನಿವಾಸ ಕಾಣಮ್ಮ 8