ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓಂಕಾರ ಪ್ರತಿಪಾದ್ಯ ಶಂಖಚಕ್ರಾಭಯಕರ ಬಿಂಕದಿಂದ ಬಾಕು ಟೊಂಕದಿ ಕಟ್ಟಿ ಮೆರೆವ ದೇವ 1 ಇಷ್ಟು ಜನರ ರೋಗ ತೊಟ್ಟಿ ತೀರ್ಥದಿಂದ ಕಳೆವ ಕಷ್ಟದ ಕಂಕಣ ಕಟ್ಟಿ ಮೆರೆವ ದೇವಾ 2 ದೇಶದೇಶದಿ ಬರುವ ದಾಸ ಜನರ ಅರ್ಥಿ ಕಾಸುವೀಸಕೆ ಕೊಟ್ಟು ಲೇಸಾಗಿರುವಿಯಿಲ್ಲಿ 3 ನಾಮ ತೀರ್ಥ ಪ್ರಸಾದ ಕಾಮಿಸೆ ವಿಕ್ರಯಿಸುವ ನೇಮಗಳನೆ ಕೊಟ್ಟು ತ್ರಿಧಾಮ ನಿಲಯನೆ 4 ಮಂಗಳ ಮಹಿಮನೆ ಗಂಗಾಜನಕನೆ ಅಂಗಜನಯ್ಯನೆ ವೆಂಕಟರಮಣನೆ 5 ತಾಳ ತಂಬೂರಿ ದಮ್ಮಡಿ ಮೇಳದೊಳು ದಾಸರು ವೇಳೆ ವೇಳೆಗೆ ಸೇವಿಸೆ ಕಾಳ ದೋಷವ ಕಳೆವ 6 ರಮಾ ಸೇವಿತÀ ವಿಜಯ ರಾಮಚಂದ್ರವಿಠಲ ನಿತ್ಯ ನಿನ್ನ ನಾಮಗಳನೆ ನುಡಿಸೊ 7
--------------
ವಿಜಯ ರಾಮಚಂದ್ರವಿಠಲ